

ಗುಂಡ್ಲುಪೇಟೆ: ಮಹಾತ್ಮ ಗಾಂಧಿ ತಮ್ಮ ಅಹಿಂಸಾ ತತ್ವ ಮತ್ತು ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿ ವಿಶ್ವಕ್ಕೆ ಶಾಂತಿ ಸಂದೇಶ ನೀಡಿದ ಮಹನೀಯರು ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಗಾಂಧಿ ಹಾಗೂ ಲಾಲ್ ಬಹಾದೂರ್ ಜಯಂತಿಯಲ್ಲಿ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು. ವಿದೇಶಿಯರ ದಾಸ್ಯದಲ್ಲಿ ಸಿಲುಕಿದ್ದ ಭಾರತಕ್ಕೆ ಅಹಿಂಸಾ ತತ್ವದ ಮೂಲಕ ಸ್ವಾತಂತ್ರ್ಯ ತಂದುಕೊಟ್ಟಿದ್ದು ವಿಶ್ವಕ್ಕೆ ಅಚ್ಚರಿ ಮೂಡಿಸಿತ್ತು. ಲಾಲ್ ಬಹಾದೂರ್ ಶಾಸ್ತ್ರಿ ಅವರು ತಮ್ಮ ಮಾನವೀಯ ಮೌಲ್ಯಗಳಿಂದ ಪ್ರಖ್ಯಾತರಾಗಿದ್ದಾರೆ. ಗಾಂಧಿ ಹಾಗೂ ಲಾಲ್ ಬಹಾದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸುವ ಸಂದರ್ಭದಲ್ಲಿ ಅವರ ತತ್ವಗಳನ್ನು ಪಾಲಿಸುವಂತಾಗಬೇಕು ಎಂದು ಹೇಳಿದರು.
ತಹಸೀಲ್ದಾರ್ ಟಿ.ರಮೇಶ್ ಬಾಬು, ಪುರಸಭೆ ಅಧ್ಯಕ್ಷ ಕಿರಣ್‌ಗೌಡ, ಮುಖ್ಯಾಧಿಕಾರಿ ವಸಂತಾ ಕುಮಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್.ಸ್ವಾಮಿ, ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್ ಇದ್ದರು.