

ಉಡುಪಿ: ಅಜಾಗರೂಕತೆಯಿಂದ ಬೈಕ್ ಚಲಾಯಿಸಿ, ರಸ್ತೆ ಬದಿ ನಡೆದುಕೊಂಡ ಹೋಗುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು ಸಾವಿಗೆ ಕಾರಣವಾದ ಆರೋಪಿಗೆ ನಗರದ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಉಡುಪಿ ತಾಲೂಕು ಉದ್ಯಾವರ ಕೊಪ್ಲದ ನಿವಾಸಿ ದರ್ಶನ್ ಅಪರಾಧಿ. ಈತ 2018, ಸೆ.4 ರಂದು ಸಾಯಂಕಾಲ ಮಣಿಪಾಲ-ಉಡುಪಿ ರಾ.ಹೆ. ಏಕಮುಖ ಸಂಚಾರ ರಸ್ತೆಯಲ್ಲಿ ಅಜಾಗರೂಕತೆಯಿಂದ ಬೈಕನ್ನು ಚಲಾಯಿಸಿ ಎಂ.ಜಿ.ಎಂ ಕಾಲೇಜಿನ ಡಾ.ಟಿ.ಎಂ.ಎ. ಪೈ ಸೈನ್ಸ್ ಮಂದಿರದ ಬಳಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸಿದ್ದೇಶ್ವರಪ್ಪ ಎಂಬುವರಿಗೆ ಡಿಕ್ಕಿ ಹೊಡೆದಿದ್ದ. ಪರಿಣಾಮ ರಸ್ತೆಗೆ ಬಿದ್ದು, ತಲೆಗೆ ತೀವ್ರ ಸ್ವರೂಪದ ಗಾಯವಾಗಿ ಸಿದ್ದೇಶ್ವರಪ್ಪ ಮೃತಪಟ್ಟಿದ್ದರು. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 1ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಅವರು ಆರೋಪಿ ದರ್ಶನ್‌ಗೆ 2 ವರ್ಷ ಜೈಲು ವಾಸ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ, ತೀರ್ಪು ನೀಡಿದ್ದಾರೆ. ಸಹಾಯಕ ಸರ್ಕಾರಿ ಅಭಿಯೋಜಕಿ ಮೋಹಿನಿ ವಾದ ಮಂಡಿಸಿದ್ದರು.