ಲಾರಿ ಡಿಕ್ಕಿಯಾಗಿ ಪಾದಚಾರಿ ಮೃತ್ಯು

Accident
Published on

ಮಂಗಳೂರು: ನಗರದ ಹೊರವಲಯದ ಪಣಂಬೂರು ದೇವಸ್ಥಾನದ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸುರತ್ಕಲ್ ಹೊಸಬೆಟ್ಟು ನಿವಾಸಿ ಅಂಬರೀಷ್ ರಾವ್(61) ಎಂಬುವರು ಮೃತಪಟ್ಟಿದ್ದಾರೆ.

ಮೆಡಿಕಲ್ ರೆಪ್ ಆಗಿದ್ದ ಅಂಬರೀಷ್ ಶನಿವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಪಣಂಬೂರು ದೇವಸ್ಥಾನದ ಬಳಿ ಅದೇ ರಸ್ತೆಯಾಗಿ ಬಂದ ಲಾರಿ ಅವರಿಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಅವರನ್ನು ವಾಹನ ಸವಾರರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರು. ಆದರೂ, ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅಂಬರೀಷ್ ಕಳೆದ 30 ವರ್ಷಗಳಿಂದ ಔಷಧ ಮಾರಾಟಗಾರರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net