ಲಾರಿ ಡಿಕ್ಕಿಯಾಗಿ ಪಾದಚಾರಿ ಸಾವು

accident-15
Published on

ಪಡುಬಿದ್ರಿ: ಡಿವೈಡರ್ ಮೇಲೆ ನಿಂತಿದ್ದ ವೇಳೆ ಲಾರಿ ಡಿಕ್ಕಿಯಾಗಿ ಮೂಳೂರು ಫಿಶರೀಸ್ ರಸ್ತೆ ಬಳಿಯ ನಿವಾಸಿ ಧನಂಜಯ ಎ.ಸುವರ್ಣ(43) ಎಂಬುವರು ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಬಾರ್ ಮುಂಭಾಗ ರಸ್ತೆ ದಾಟಲು ಡಿವೈಡರ್ ಮೇಲೆ ನಿಂತಿದ್ದ ಸಂದರ್ಭ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ನಿಲ್ಲಿಸಿದೆ ಪರಾರಿಯಾಗಿರುವ ಚಾಲಕನ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net