

ಹಾವೇರಿ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬ ಕಾಲು ಜಾರಿ ಚರಂಡಿಯಲ್ಲಿ ಬಿದ್ದು ಮೃತಪಟ್ಟ ಟನೆ ನಗರದ ಕಾಗಿನೆಲೆ ಕ್ರಾಸ್ನಲ್ಲಿ ನಡೆದಿದೆ.
ಹಾನಗಲ್ಲ ತಾಲೂಕಿನ ರಾಮತೀರ್ಥ ಹೊಸಕೊಪ್ಪದ ಪ್ರವಿಣ ಶಿವಾಜೆಪ್ಪ ಸುಬ್ಬಣ್ಣನವರ (34) ಮೃತ ವ್ಯಕ್ತಿ.
ಈತ ಪೆಟ್ರೋಲ್ ಬಂಕ್ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಮಧ್ಯಾಹ್ನ ಊಟ ಮಾಡುವ ಸಲುವಾಗಿ ರಸ್ತೆ ಬದಿ ನಡೆದುಕೊಂಡು ಬರುತ್ತಿದ್ದ. ಈ ಸಮಯದಲ್ಲಿ ಕಾಲು ಜಾರಿ ಚರಂಡಿಯಲ್ಲಿ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.