ಕಾರು ಡಿಕ್ಕಿಯಾಗಿ ಪಾದಚಾರಿ ಮೃತ್ಯು

accident
Published on

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಬಡಾ ಎರ್ಮಾಳ್‌ನಲ್ಲಿ ಕಾರು ಡಿಕ್ಕಿಯಾಗಿ ಬಡಾ ಗ್ರಾಮ ನಿವಾಸಿ ರಮೇಶ್(66) ಎಂಬುವರು ಭಾನುವಾರ ಮೃತಪಟ್ಟಿದ್ದಾರೆ. ಆಟೋ ನಿಲ್ದಾಣದತ್ತ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net