ಚಿಕಿತ್ಸೆ ಲಿಸದೆ ಪಾದಚಾರಿ ಸಾವು

Published on

ಕುದೂರು: ತಿಪ್ಪಸಂದ್ರ ಹೋಬಳಿಯ ವಿರುಪಾಪುರ&ಸುಗ್ಗನಹಳ್ಳಿ ರಸ್ತೆ ಬದಿಯಲ್ಲಿ ಆಟೋ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ ಬೆಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ವಿರುಪಾಪುರ ಗ್ರಾಮದ ಕೂಲಿ ಕಾರ್ಮಿಕ ಮಹದೇವಯ್ಯ (47) ಮೃತ. ಕೆಲಸ ಮುಗಿಸಿ ಪುತ್ರನೊಂದಿಗೆ ಮಹದೇವಯ್ಯ ಅವರು ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಮಾಯಸಂದ್ರ ಕಡೆಯಿಂದ ಬಂದ ಆಟೋ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ತುಮಕೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕುದೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net