ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ

accident-15
Published on

ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಗಂಭೀರ ಗಾಯಗೊಂಡ ಘಟನೆ ನಂದಳಿಕೆ ಗ್ರಾಮದಲ್ಲಿ ನಡೆದಿದೆ. ಬುಧವಾರ ರಾತ್ರಿ ನಂದಳಿಕೆ ಗ್ರಾಪಂ ಎದುರು ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ನಂದಳಿಕೆ ಆರ್ಯಾಡು ನಿವಾಸಿ ಸಂತೋಷ್ ಎಂಬುವರಿಗೆ ಬೆಳ್ಮಣ್ ಕಡೆಯಿಂದ ಕಾರ್ಕಳ ಕಡೆಗೆ ಸಾಗುತ್ತಿದ್ದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ಗಾಯಾಳುವನ್ನು ಬಳಿಕ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net