ಬಸ್ ಡಿಕ್ಕಿಯಾಗಿ ಪಾದಚಾರಿ ಗಾಯ

accident raichur
Published on

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಶನಿವಾರ ರಸ್ತೆ ಬದಿಯಲ್ಲಿ ನಿಂತಿದ್ದ ಪಾದಚಾರಿಯೊಬ್ಬರಿಗೆ ಬಸ್ ಡಿಕ್ಕಿ ಹೊಡೆದಿದೆ. ಗಂಗೊಳ್ಳಿ ಗ್ರಾಮದ ಸುಧೀರ್(41) ಎಂಬುವರು ಗಂಗೊಳ್ಳಿ ಗ್ರಾಮದ ತ್ರಾಸಿ-ಗಂಗೊಳ್ಳಿ ಮುಖ್ಯ ರಸ್ತೆ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ ತ್ರಾಸಿ ಕಡೆಯಿಂದ ಗಂಗೊಳ್ಳಿ ಬಂದರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net