

ಕಡಬ: ರಿಕ್ಷಾ ಡಿಕ್ಕಿಯಾಗಿ ಪಾದಚಾರಿ ಗಾಯಗೊಂಡ ಘಟನೆ ಕಡಬ ಪೇಟೆಯಲ್ಲಿ ಶುಕ್ರವಾರ ನಡೆದಿದೆ. ಸುಬ್ರಹ್ಮಣ್ಯ ಗ್ರಾಮದ ನೂಚಿಲ ನಿವಾಸಿ ಹರಿಶ್ಚಂದ್ರ ಕೆ.ಎನ್.ಎಂಬುವರು ಕಡಬ ಪೇಟೆಯಲ್ಲಿರುವ ಶ್ರೀ ದುರ್ಗಾಂಬಾ ದೇವಸ್ಥಾನದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ರಿಕ್ಷಾ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹರಿಶ್ಚಂದ್ರ ಅವರ ಪತ್ನಿ ಮೂಕಾಂಬಿಕಾ ನೀಡಿದ ದೂರಿನಂತೆ ಘಟನೆಗೆ ಕಾರಣವಾದ ರಿಕ್ಷಾ ಚಾಲಕ ವಿನೋದ್ ಎಂಬುವರ ವಿರುದ್ಧ ಕಡಬ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ.