

ಮೈಸೂರು: ಉಡುಪಿಯ ಶ್ರೀ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಕೈಗೊಂಡಿರುವ 36ನೇ ಚಾತುರ್ಮಾಸ್ಯ ವ್ರತದ ಸಮಾರೋಪ ಸಮಾರಂಭವನ್ನು ಗುರುವಾರ ಸರಸ್ವತೀಪುರಂ ಶ್ರೀ ಕೃಷ್ಣಧಾಮದಲ್ಲಿ ಹಮ್ಮಿಕೊಳ್ಳಲಾಗಿದೆ.
ಗಾಯಕಿ ಮೇಧಾ ವಿದ್ಯಾಭೂಷಣ್‌ರಿಂದ ಸಂಜೆ 4ಕ್ಕೆ ಭಕ್ತಿಗೀತೆ ಗಾಯನ, ನಂತರ ಸಂಜೆ 5.15ಕ್ಕೆ ನಗರದ ಶ್ರೀ ಅವಧೂತ ದತ್ತಪೀಠದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶ್ರೀ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಗೋವಾ ರಾಜ್ಯಪಾಲ ಪಿ.ಎಸ್. ಶ್ರೀಧರನ್ ಪಿಳ್ಳೈ, ಬೆಂಗಳೂರು ಪೂರ್ಣಪ್ರಜ್ಞ ಸಂಶೋಧನಾ ಮಂದಿರದ ನಿರ್ದೇಶಕ ಡಾ. ಆನಂದತೀರ್ಥ ನಾಗಸಂಪಿಗೆ, ಚಾತುರ್ಮಾಸ್ಯ ಸಮಿತಿ ಪ್ರಮುಖರಾದ ವಾಸುದೇವ ಭಟ್, ಎಂ.ಕೆ. ಪುರಾಣಿಕ್, ರವಿಶಾಸ್ತ್ರಿ , ಸುಬ್ರಹ್ಮಣ್ಯ ತಂತ್ರಿ , ಶ್ರೀ ಕೃಷ್ಣ ಮಿತ್ರ ಮಂಡಳಿ ಅಧ್ಯಕ್ಷ ಪಿ.ಎಸ್. ರಮೇಶ್ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.