

ಮಂಗಳೂರು : ಪೇಜಾವರ ವಿಶ್ವೇಶತೀರ್ಥ ಶ್ರೀ ಪಾದರ ಪಂಚಮ ಪುಣ್ಯ ತಿಥಿಯ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ವತಿಯಿಂದ
ಪೇಜಾವರ ವಿಶ್ವೇಶತೀರ್ಥ ನಮನ -2024 ಕಾರ್ಯಕ್ರಮ ಡಿ.29ರಂದು ಮಧ್ಯಾಹ್ನ 2.30ಕ್ಕೆ ಕದ್ರಿ ಕಂಬಳ ರಸ್ತೆಯ ಮಂಜುಪ್ರಾಸಾದದಲ್ಲಿ ನಡೆಯಲಿದೆ.
ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ , ಚಿತ್ರಾಪುರ ಮಠದ
ಶ್ರೀ ವಿದ್ಯೇಂದ್ರತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಮೇಯರ್ ಮನೋಜ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಡಾ.ಎಂ.ಮೋಹನ ಆಳ್ವ ಅಧ್ಯಕ್ಷತೆ ವಹಿಸಲಿದ್ದಾರೆ.
ಮೂಲ್ಕಿ ಸೀಮೆಯ ಅರಸ ದುಗ್ಗಣ್ಣ ಸಾವಂತ , ಕುಲದೀಪ ಎಂ. ಚೌಟರ ಅರಮನೆ , ವಿದ್ವಾಂಸ ಡಾ.ಸತ್ಯಕೃಷ್ಣ ಭಟ್, ಕಟೀಲು ಲಕ್ಷ್ಮೀ
ನಾರಾಯಣ ಆಸ್ರಣ್ಣ, ಫಾ,ಫ್ರಾನ್ಸಿಸ್.ಎಕ್ಸ್ ಗೋಮ್ಸ್, ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಡಿ.ವೇದವ್ಯಾಸ ಕಾಮತ್, ಶರವು ರಾಘವೇಂದ್ರ ಶಾಸ್ತ್ರಿ, ಡಾ.ಹರಿಕೃಷ್ಣ ಪುನರೂರು, ಪ್ರೊ.ಎಂ.ಬಿ.ಪುರಾಣಿಕ್, ರಘುನಾಥ ಸೊಮಯಾಜಿ, ಆಯಿಷಾ ಪೆರ್ಲ ಮುಖ್ಯ ಅತಿಥಿಗಳಾಗಿ ಭಾಗವಹಿಸಿಲಿದ್ದಾರೆ. ವಿವಿಧ ತಂಡಗಳಿಂದ ಕೃಷ್ಣ ಗೀತ ಗಾಯನ ನಡೆಯಲಿದೆ. ವಿವಿಧ ಕ್ಷೇತ್ರಗಳ ಸಾಧಕರಿಗೆ ಪೇಜಾವರ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.