

ಉಡುಪಿ: ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬುಧವಾರ ದೆಹಲಿಯಲ್ಲಿ ಮಾಜಿ ಉಪಪ್ರಧಾನಿ, ಬಿಜೆಪಿ ಹಿರಿಯ ಧುರೀಣ ಎಲ್. ಕೆ ಅಡ್ವಾಣಿಯವರನ್ನು ಭೇಟಿ ಮಾಡಿದರು.
ಉಭಯಕುಶಲೋಪರಿ ನಡೆಸಿ ಶ್ರೀಗಳು ದೀರ್ಘಾಯುರಾರೋಗ್ಯವನ್ನು ಶ್ರೀಕೃಷ್ಣನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು. ಅಯೋಧ್ಯಾ ರಾಮಜನ್ಮಭೂಮಿ ಆಂದೋಲನದಲ್ಲಿ ಅಡ್ವಾಣಿಯವರ ಹೋರಾಟದ ಫಲವಾಗಿ ಇಂದು ಭವ್ಯರಾಮಮಂದಿರ ನಿರ್ಮಾಣಗೊಳ್ಳುವಂತಾಗಿದೆ ಎಂದರು.
ವಿಶ್ವೇಶತೀರ್ಥಶ್ರೀಪಾದರನ್ನು ಸ್ಮರಿಸಿದ ಅಡ್ವಾಣಿಯವರು, ತಮಗೆ ಸ್ಫೂರ್ತಿಯಾಗಿದ್ದರು ಎಂದರು.
ಅಡ್ವಾಣಿಯವರಿಗೆ ಶ್ರೀ ಕೃಷ್ಣನ ಗಂಧ ಪ್ರಸಾದ ಶಾಲು ಸ್ಮರಣಿಕೆ ಫಲಮಂತ್ರಾಕ್ಷತೆಯಿತ್ತು ಆಶೀರ್ವದಿಸಿದರು . ಅಡ್ವಾಣಿ ಪುತ್ರಿ ಪ್ರತಿಭಾ ಅಡ್ವಾಣಿ ಮತ್ತು ಮನೆ ಮಂದಿ ಶ್ರೀಗಳವರನ್ನು ಬರಮಾಡಿಕೊಂಡರು.
ವಿದ್ವಾನ್ ದೇವಿಪ್ರಸಾದ್ ಭಟ್ವ, ವಿಷ್ಣುಮೂರ್ತಿ ಆಚಾರ್ಯ , ಕೃಷ್ಣ ಭಟ್ ಉಪಸ್ಥಿತರಿದ್ದರು .