ಕಾಶಿ ಕಾರಿಡಾರ್ ಉದ್ಘಾಟನಾ ಸಮಾರಂಭಕ್ಕೆ ಪೇಜಾವರ ಶ್ರೀ

Pejavara Shree
Published on

ಉಡುಪಿ: ತೀರ್ಥ ಕ್ಷೇತ್ರ ಕಾಶಿಯಲ್ಲಿ ಡಿ.13ರಂದು ನಡೆಯಲಿರುವ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರಗಳ ಮಹತ್ವಾಕಾಂಕ್ಷಿ ಕಾಶಿ ಕಾರಿಡಾರ್ ಯೋಜನೆ ಉದ್ಘಾಟನಾ ಸಮಾರಂಭದಲ್ಲಿ ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ದೇಶದ ಪ್ರಮುಖ ಸಾಧು ಸಂತರನ್ನು ಆಹ್ವಾನಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರು ಉ.ಪ್ರ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಡಿ.7ರಂದು ಯೋಗಿ ಅವರು ಪೇಜಾವರ ಶ್ರೀಗಳಿಗೆ ದೂರವಾಣಿ ಕರೆ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವಿನಂತಿಸಿದ್ದರು. ಅದರಂತೆ ಶ್ರೀಗಳು ಭಾನುವಾರ ರಾತ್ರಿ ಮಂಗಳೂರಿನಿಂದ ಮುಂಬೈಗೆ ತೆರಳಿ ಸೋಮವಾರ ಮುಂಜಾನೆ ಮಠದ ಪಟ್ಟದ ದೇವರ ಪೂಜಾದಿಗಳನ್ನು ಶಾಖಾ ಮಠದಲ್ಲೇ ಪೊರೈಸಿ ಬಳಿಕ ಕಾಶಿಗೆ ತೆರಳಲಿದ್ದಾರೆ ಎಂದು ಪೇಜಾವರ ಮಠದ ಪ್ರಕಟಣೆ ತಿಳಿಸಿದೆ.

ವಿಶ್ವನಾಥ ಕಾರಿಡಾರ್ ಉದ್ಘಾಟನೆಗೆ ದೇಶಾದ್ಯಂತ ಅನೇಕ ಪ್ರಮುಖ ಸಾಧು ಸಂತರನ್ನು ಆಹ್ವಾನಿಸಲಾಗುತ್ತಿದೆ. ಅದರಂತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಕರೆ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಹೀಗಾಗಿ ಸೋಮವಾರ ಕಾಶಿಗೆ ಹೋಗಲಿದ್ದೇವೆ.

| ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ. ಪೇಜಾವರ ಮಠ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net