ಮಹಿಳೆಯರ ಸೀಟಿನಲ್ಲಿ ಕುಳಿತು ಬಿಎಂಟಿಸಿ ಬಸ್ ಪ್ರಯಾಣ; ಪುರುಷ ಪ್ರಯಾಣಿಕರಿಗೆ ಬಿದ್ದ ದಂಡವೆಷ್ಟು?

BMTC
Published on

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ವಾಹನಗಳಲ್ಲಿ ಟಿಕೇಟ್ ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುತ್ತಿದ್ದ 3382 ಪ್ರಯಾಣಿಕರನ್ನು ಪತ್ತೆ ಹಚ್ಚಿ ಅವರಿಂದ 6.5 ಲಕ್ಷ ರೂ. ದಂಡ ವಸೂಲಿ ಮಾಡಿದೆ.

ಮಹಿಳಾ ಪ್ರಯಾಣಿಕರಿಗಾಗಿ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸುತ್ತಿದ್ದ 268 ಪುರುಷ ಪ್ರಯಾಣಿಕರಿಂದ 26,800 ದಂಡ ವಸೂಲಿ ಮಾಡಲಾಗಿದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಬಿಎಂಟಿಸಿ ಆದಾಯದ ಸೋರಿಕೆ ತಡೆಗಟ್ಟುವ ನಿಟ್ಟಿನಲ್ಲಿ ನಗರದಾದ್ಯಂತ ಸಂಚರಿಸುವ ಬಿಎಂಟಿಸಿ ಬಸ್‌ಗಳಲ್ಲಿ ಸಂಸ್ಥೆಯ ತನಿಖಾ ತಂಡವು ಏಪ್ರಿಲ್ ತಿಂಗಳಿನಲ್ಲಿ ಒಟ್ಟು 14670 ಟ್ರಿಪ್‌ಗಳನ್ನು ತಪಾಸಣೆ ನಡೆಸಿ 3382 ಟಿಕೇಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು 6,56,740 ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ದ 1340 ಪ್ರಕರಣಗಳನ್ನು ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net