ಬಾಕಿ ಯೋಜನೆಗಳನ್ನು ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಅಧಿಕಾರಿಗಳಿಗೆ ಸೂಚನೆ

050121 Koppal Offiers Meeting
ಕೊಪ್ಪಳದಲ್ಲಿ ಡಿಸಿ ಎಸ್.ವಿಕಾಸ್ ಕಿಶೋರ್ ಅಧ್ಯಕ್ಷತೆಯಲ್ಲಿ ಮಂಗಳವಾರ ವಿವಿಧ ಇಲಾಖೆ ಅಧಿಕಾರಿಗಳ ಸಭೆ ಹಮ್ಮಿಕೊಳ್ಳಲಾಯಿತು. ಜಿಪಂ ಸಿಇಒ ರಘುನಂದನ್ ಮೂರ್ತಿ, ಎಡಿಸಿ ಎಂ.ಪಿ.ಮಾರುತಿ ಇದ್ದರು.
Published on

ಕೊಪ್ಪಳ: ಆಯಾ ಇಲಾಖೆಗಳಲ್ಲಿ ಬಾಕಿ ಇರುವ ವಿವಿಧ ಯೋಜನೆಗಳನ್ನು ಶೀಘ್ರ ಅನುಷ್ಠಾನಗೊಳಿಸಿ, ಡಿಸೆಂಬರ್ ತಿಂಗಳ ಅಂತ್ಯದವರೆಗೆ ಸಾಧಿಸಿದ ಪ್ರಗತಿ ವಿವರ ಸಲ್ಲಿಸಿ ಎಂದು ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಅಧಿಕಾರಿಗಳಿಗೆ ಸೂಚಿಸಿದರು.

ಜ.11 ರಂದು ಸಿಎಂ ಅಧ್ಯಕ್ಷತೆಯಲ್ಲಿ ಜರುಗಲಿರುವ ಸಮ್ಮೇಳನ ಸಭೆಯ ಅಂಗವಾಗಿ ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿಯಲ್ಲಿ ಮಾತನಾಡಿದರು. ಜ.11ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ನವರು ಪ್ರಾದೇಶಿಕ ಆಯುಕ್ತ, ಜಿಲ್ಲಾಧಿಕಾರಿ ಮತ್ತು ಜಿಪಂ ಸಿಇಒಗಳೊಂದಿಗೆ ಸಭೆ ನಡೆಸಲಿದ್ದು, ಸಭೆಗೆ ಎಲ್ಲ ಇಲಾಖೆಗಳು ನಮ್ಮ ಜಿಲ್ಲೆಯಲ್ಲಿ ಸಾಧಿಸಿದ ಪ್ರಗತಿ ವಿವರ ಸಲ್ಲಿಸಬೇಕು. ಎಲ್ಲಾ ಇಲಾಖೆಗಳ ಅಧಿಕಾರಿಗಳು ಡಿ.2020ರ ಅಂತ್ಯದವರೆಗಿನ ಇಲಾಖೆ ಪ್ರಗತಿ ವಿವರ ಸಲ್ಲಿಸುವಂತೆ ಸೂಚಿಸಿದರೂ, ಅನೇಕರು ಸಮಪರ್ಕಕ ಮಾಹಿತಿ ನೀಡಿಲ್ಲ. ಕೂಡಲೇ ಎಲ್ಲ ವಿವರ ಸಲ್ಲಿಸಬೇಕು. ಇಲ್ಲದಿದ್ದರೆ ಶಿಸ್ತುಕ್ರಮ ಜರುಗಿಸಲಾಗುವುದು. ಬಹಳಷ್ಟು ಇಲಾಖೆಗಳು ಪ್ರಮುಖ ಯೋಜನೆಗಳನ್ನೇ ಅನುಷ್ಠಾನಕ್ಕೆ ತಂದಿಲ್ಲ. ಸರ್ಕಾರಿ ಕಟ್ಟಡಗಳ ನಿರ್ಮಾಣ, ನಿವೇಶನಗಳ ಗುರುತಿಸುವಿಕೆ ಹಾಗೂ ಹಂಚಿಕೆ, ಫಲಾನುಭವಿಗಳ ಆಯ್ಕೆ, ಬೆಳೆ ಸಮೀಕ್ಷೆ ಮುಂತಾದವುಗಳ ಬಗ್ಗೆ ಸಮಗ್ರ ವರದಿ ಸಲ್ಲಿಸಿ. ಬಾಕಿ ಉಳಿದ, ಕ್ರಿಯಾ ಯೋಜನೆ ಅನುಮೋದನೆಗೊಂಡು ಅನುದಾನ ಬಿಡುಗಡೆಯಾದ ಯೋಜನೆಗಳ ಬಗ್ಗೆ ಗಮನಕ್ಕೆ ತನ್ನಿ ಎಂದು ಸೂಚಿಸಿದರು.

ಯೋಜನೆಗಳು ಪೂರ್ಣಗೊಂಡ ಬಗ್ಗೆ ಹಾಗೂ ಏನಾದರೂ ಸಮಸ್ಯೆಯಾಗಿದ್ದಲ್ಲಿ ಈ ಬಗ್ಗೆ ಮೇಲಧಿಕಾರಿಗಳಿಗೆ ತಿಳಿಸಬೇಕು. ಸಭೆಗೆ ಬರುವಾಗ ಸಂಪೂರ್ಣ ಮಾಹಿತಿಯೊಂದಿಗೆ ಬನ್ನಿ. ವಿವಿಧ ಜಿಲ್ಲೆಗಳಲ್ಲಿ ಇ-ಆಫೀಸ್ ಕಾರ್ಯಾರಂಭಗೊಂಡಿದೆ. ಅದರಂತೆ ನಮ್ಮ ಜಿಲ್ಲೆಯಲ್ಲೂ ಎಲ್ಲಾ ಇಲಾಖೆಗಳು ಎನ್‌ಐಸಿ ಸಹಾಯದಿಂದ ಇ-ಆಫೀಸ್‌ನಲ್ಲಿ ಪತ್ರ ವ್ಯವಹಾರ ನಡೆಸಬೇಕು ಎಂದು ಜಿಪಂ ಸಿಇಒ ರಘುನಂದನ್ ಮೂರ್ತಿ ಅಧಿಕಾರಿಗಳಿಗೆ ಸೂಚಿಸಿದರು. ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಜಿ.ಪಂ. ಉಪಕಾರ್ಯದರ್ಶಿ ಶರಣಬಸವರಾಜ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net