ಕೊಳ್ಳೇಗಾಲದಲ್ಲಿ ಪಿಂಚಣಿ ಅದಾಲತ್ ಇಂದು

Published on

ಕೊಳ್ಳೇಗಾಲ: ತಾಲೂಕಿನ ಕಸಬಾ ಹೋಬಳಿ ಹೊಸಮೂಲಂಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನ.30 ಬೆಳಗ್ಗೆ 11 ಗಂಟೆಗೆ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ.

ಸಾಮಾಜಿಕ ಭದ್ರತೆ ಯೋಜನೆಯ ವಿವಿಧ ಪಿಂಚಣಿಗಳಾದ ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಅಂಗವಿಕಲ ವೇತನ, ನಿರ್ಗತಿಕ ವಿಧವಾ ವೇತನ, ಸಂಧ್ಯಾಸುರಕ್ಷಾ ವೇತನ, ಮನಸ್ವಿನಿ ಮತ್ತು ಮೈತ್ರಿ ಪಿಂಚಣಿಗಳಿಗೆ ಸಂಬಂಧಿಸಿದಂತೆ ಅರ್ಹ ಅರ್ಜಿದಾರರಿಗೆ ಪಿಂಚಣಿ ಮಂಜೂರು ಮಾಡುವ ಸಲುವಾಗಿ ಪಿಂಚಣಿ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರು ಹಾಗೂ ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಗ್ರೇಡ್-2 ತಹಸೀಲ್ದಾರ್ ಡಾ.ಕೆ.ಧನಂಜಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net