ಮಡಿಕೇರಿಯಲ್ಲಿ ಪಿಂಚಣಿ ಅದಾಲತ್

21adarshkdga8
Published on

ಮಡಿಕೇರಿ: ನಗರದ ನಾಡ ಕಚೇರಿ ಆವರಣದಲ್ಲಿ ಉಪ ವಿಭಾಗಾಧಿಕಾರಿ ಟಿ.ಜವರೇಗೌಡರ ಅಧ್ಯಕ್ಷತೆಯಲ್ಲಿ ಸೋಮವಾರ ಪಿಂಚಣಿ ಅದಾಲತ್ ಆಯೋಜಿಸಲಾಗಿತ್ತು.

ಈ ಸಂದರ್ಭ ಅರ್ಹ ಫಲಾನುಭವಿಗಳಿಗೆ ಪಿಂಚಣಿ ಆದೇಶ ಪತ್ರ ವಿತರಿಸಲಾಯಿತು. ಅಂಗವಿಕಲ, ವೃದ್ಧಾಪ್ಯ, ವಿಧವಾ, ಮನಸ್ವಿನಿ ವೇತನದ ಆದೇಶ ಪತ್ರವನ್ನು ವಿತರಿಸಲಾಯಿತು.

ಅರ್ಹ ಫಲಾನುಭವಿಗಳಿಂದ ಹೊಸ ಅರ್ಜಿಗಳನ್ನು ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಸ್ವೀಕರಿಸಲಾಯಿತು. ಕಾರ್ಯಕ್ರಮದಲ್ಲಿ ಕಂದಾಯ ಪರಿವೀಕ್ಷಕರಾದ ಶ್ರೀನಿವಾಸ್, ಹಾಗೂ ತಾಲೂಕು ವ್ಯಾಪ್ತಿಯ ಗ್ರಾಮಲೆಕ್ಕಿಗರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net