ಜನರಿಗೆ ಬೆಳಗ್ಗೆ ಎದ್ದರೆ ಬೆಲೆ ಏರಿಕೆಯ ಭಯ; ರಮೇಶ್‌ಗೌಡ ಆಕ್ರೋಶ|Price hike

j (3)
Published on

ಬೆಂಗಳೂರು: ಜನರು ರಾತ್ರಿ ಮಲಗಿ ಬೆಳಗ್ಗೆ ನಿದ್ರೆಯಿಂದ ಮೇಲೆ ಏಳಲು ಭಯಪಡುವಂತಹ ಧಾರುಣ ಪರಿಸ್ಥಿತಿ ರಾಜ್ಯದಲ್ಲಿ ಸೃಷ್ಟಿಯಾಗಿದೆ. ಬೆಲೆ ಏರಿಕೆ ಬವಣೆಯಿಂದ ಜನರು ತತ್ತರಿಸಿ ಹೋಗಿದ್ದಾರೆ(People are afraid of price hike when they wake up in the morning) ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ. ರಮೇಶ್‌ಗೌಡ(H M Rameshgowda) ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷದ ರಾಜ್ಯ ಕಚೇರಿ ಜೆ.ಪಿ. ಭವನದಲ್ಲಿ ಗುರುವಾರ ಪಕ್ಷದ ಸಾಂಸ್ಥಿಕ ಚುನಾವಣೆ ಹಾಗೂ ಮುಂಬರುವ ಬಿಬಿಎಂಪಿ ಚುನಾವಣೆಗೆ ಸಜ್ಜಾಗುವ ನಿಟ್ಟಿನಲ್ಲಿ ಕರೆಯಲಾಗಿದ್ದ ಮುಖಂಡರ ಸಭೆಯಲ್ಲಿ ಮಾತನಾಡಿದರು.

ರಾಜ್ಯ ಸರ್ಕಾರ ಬೆಲೆ ಏರಿಕೆ ವಿಚಾರದಲ್ಲಿ ಬಹಳ ಕೆಟ್ಟು ಹೆಸರು ತೆಗೆದುಕೊಳ್ಳುತ್ತಿದೆ. ದಿನದಿಂದ ದಿನಕ್ಕೆ ಜನರು ರೋಸಿ ಹೋಗಿದ್ದಾರೆ. ಈಗ ಚುನಾವಣೆ ನಡೆದರೂ ನಲವತ್ತು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲ್ಲುವುದಿಲ್ಲ ಎಂದು ಕಿಡಿಕಾರಿದರು.

ಜನಾಕ್ರೋಶ ಕಟ್ಟೆಯೊಡೆಲಿದೆ. ದುಬಾರಿ ಬೆಲೆಗಳಿಂದ ಜನರು ಸಂಕಷ್ಟಕ್ಕೆ ಸಿಲುಕಿ ನಿತ್ಯದ ಜೀವನ ನಡೆಸುತ್ತಿರುವುದೇ ಕಷ್ಟವಾಗಿದೆ. ದಿನವೂ ಸರ್ಕಾರ ಬೆಲೆ ಏರಿಕೆ ಮಾಡುತ್ತಿದೆ ಎಂದು ಹೇಳಿದರು.

ಪಕ್ಷದ ಸಂಘಟನೆಗೆ ಎಲ್ಲರೂ ಒತ್ತು ನೀಡಬೇಕು. ಪಕ್ಷದ ಸಾಂಸ್ಥಿಕ ಚುನಾವಣೆಗೆ ಎಲ್ಲರೂ ಸಹಕರಿಸಬೇಕು. ಬೆಲೆ ಏರಿಕೆ ವಿರುದ್ಧವಾಗಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿಯೂ ಪ್ರತಿಭಟನೆ ಹೋರಾಟಗಳನ್ನು ನಡೆಸಬೇಕೆಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ಜಿಲ್ಲಾ ಚುನಾವಣೆ ಅಧಿಕಾರಿ ಶೈಲಾ ಸಂತೋಷ್, ಬೆಂಗಳೂರು ನಗರದ ವಿಧಾನಸಭಾ ಕ್ಷೇತ್ರ ಅಧ್ಯಕ್ಷರು, ವಿವಿಧ ವಿಭಾಗಗಳ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡರುಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net