ಜನರಲ್ಲಿ ಜಾಗೃತಿ ಮೂಡಿಸಿ

8mnv01
Published on

ಮಾನ್ವಿ: ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಮತದಾನ ನಡೆಯಲಿದ್ದು, ಪ್ರತಿಯೊಬ್ಬರೂ ಮತಗಟ್ಟೆಗೆ ಹೋಗಿ ಮತದಾನ ಮಾಡಬೇಕು ಎಂದು ಸಹಾಯಕ ಚುನಾವಣಾ ಅಧಿಕಾರಿ ಪ್ರಕಾಶ ವಿ. ಹೇಳಿದರು.

ಪಟ್ಟಣದ ಕಾಕತೀಯ ಶಾಲೆ ಅವರಣದಲ್ಲಿ ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಸೋಮವಾರ ಮಾತನಾಡಿದರು. ಮಾನ್ವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಜನರಲ್ಲಿ ಜಾಗೃತಿ ಮೂಡಿಸಬೇಕು. ಕಳೆದ ಚುನಾವಣೆಗಿಂತ ಈ ಬಾರಿ ಹೆಚ್ಚಿನ ಮತದಾನ ಆಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜಗತ್ತಿನಲ್ಲಿ ಭಾರತವೇ ಬಲಿಷ್ಠ ದೇಶವಾಗಿದೆ. ಆದರೆ, ಮತದಾನದ ಬಗ್ಗೆ ಜನರಲ್ಲಿ ಕಡಿಮೆ ಇದೆ. ಮತದಾನದ ಕುರಿತು ಜನರಲ್ಲಿ ಅರಿವು ಮೂಡಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net