ಜನರಿಗೆ ಸುಳ್ಳು ಹೇಳುವ ಬಿಜೆಪಿ -ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪ

HDL Holalu DK Shivakumar Campaign
ಹೂವಿನಹಡಗಲಿ ತಾಲೂಕಿನ ಹೊಳಲು ಗ್ರಾಮದಲ್ಲಿ ಗುರುವಾರ ಕಾಂಗ್ರೆಸ್ ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿದರು.
Published on

ಹೂವಿನಹಡಗಲಿ: ಬಿಜೆಪಿಯವರು ದೇಶದ ಜನರಿಗೆ ಸುಳ್ಳು ಹೇಳುವ ಮೂಲಕ ಆಡಳಿತ ಮಾಡುತ್ತಾ ಕೋಮುವಾದ ಬಿತ್ತುದ್ದಿದ್ದಾರೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ತಾಲೂಕಿನ ಹೊಳಲು ಗ್ರಾಮದಲ್ಲಿ ಗುರುವಾರ ಕಾಂಗ್ರೆಸ್ ಆಯೋಜಿಸಿದ್ದ ಪಕ್ಷದ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಸಿಎಂ ಬೊಮ್ಮಾಯಿ ಶೇ.40 ಲಂಚ ಪಡೆದು ಆಡಳಿತ ನಡೆಸಿದ್ದಾರೆ. ಬಿಜೆಪಿಯವರಿಂದ ರಾಷ್ಟ್ರದಲ್ಲಿ ಕರ್ನಾಟಕಕ್ಕೆ ಕಳಂಕ ಬಂದಿದೆ. ಅಚ್ಛೇ ದಿನ್ ಆಯೇಗಾ ಎಂದಿದ್ದ ಬಿಜೆಪಿಗರು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಾಕುತ್ತೇವೆ ಎಂದಿದ್ದರು. ಯಾರ ಖಾತೆಗೆ ಹಣ ಬಂದಿದೆ ಹೇಳಿ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಈ ದೇಶದ ಶಕ್ತಿ. ಎಲ್ಲ ವರ್ಗದ ಅಭಿವೃದ್ಧಿಯ ಬಗ್ಗೆ ಆಲೋಚನೆ ಮಾಡುತ್ತದೆ. ಆದರೆ, ಬಿಜೆಪಿಯವರ ಬಳಿ ಜಾತಿ ವಿಚಾರ ಬಿಟ್ಟರೆ ಬೇರೆ ಯಾವ ವಿಷಯವೂ ಇಲ್ಲ. ಕಾಂಗ್ರೆಸ್ ನೀಡಿರುವ ಗ್ಯಾರಂಟಿಗಳ ಬಗ್ಗೆ ಮಾತನಾಡುವವರಿಗೆ ಚುನಾವಣೆ ವೇಳೆ ಜನರೇ ಉತ್ತರ ನೀಡುತ್ತಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net