ಜನರು ದುಶ್ಚಟಗಳಿಂದ ದೂರವಿರಿ

Published on

ಬಳ್ಳಾರಿ : ಸಾರ್ವಜನಿಕರು ಬೀಡಿ, ತಂಬಾಕು, ಗುಟ್ಟಾ ಹಾಗೂ ಮದ್ಯ ಸೇವನೆ ಸೇರಿದಂತೆ ದುಷ್ಚಟಗಳಿಂದ ದೂರವಿರಬೇಕು ಎಂದು ಡಿಎಚ್‌ಒ ಡಾ.ವೈ.ರಮೇಶಬಾಬು ಹೇಳಿದರು.

ಇಲ್ಲಿನ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ವಿಶಿಷ್ಟತೆಯಿಂದ ಏಕತೆ ಎಂಬ ಘೋಷವಾಕ್ಯದೊಂದಿಗೆ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ಜನಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಇತ್ತೀಚಿಗೆ ಜನರಲ್ಲಿ ಬಾಯಿ, ಗರ್ಭಾಶಯ ಮತ್ತು ಸ್ತನ ಕ್ಯಾನ್ಸರ್ ಹೆಚ್ಚಾಗಿ ಕಂಡು ಬರುತ್ತವೆ. ಕ್ಯಾನ್ಸರ್ ಖಾಯಿಲೆಯ ಬಗ್ಗೆ ಜಾಗೃತಿ ಮತ್ತು ಅರಿವು ಹೊಂದಬೇಕು. ಕ್ಯಾನ್ಸರ್ ಚಿಕಿತ್ಸೆಗೆ ಜಿಲ್ಲೆಯ ಬಿಮ್ಸ್‌ನಲ್ಲಿ ಸೌಲಭ್ಯವಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ವಿ.ಕೆ.ಡಾ.ಮರಿಯಂಬಿ ಮಾತನಾಡಿ, ಇಂದು ಅಧುನಿಕ ಜೀವನ ಶೈಲಿಗಳಿಂದ ತಂಬಾಕು ಬಳಕೆಯಿಂದ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಪ್ರಸುತ್ತ ಆಧುನಿಕ ತಂತ್ರಜ್ಞಾನದಿಅದ ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತಗಳಲ್ಲಿ ಪತ್ತೆಮಾಡಬೇಕು. ಖಚಿತ ಪಟ್ಟಲ್ಲಿ ಸಂಪೂರ್ಣವಾಗಿ ಚಿಕಿತ್ಸೆ ನೀಡಿ ಗುಣಮುಖಗೊಳಿಸಬಹುದು ಎಂದರು.

ಮುಂದಿನ ದಿನಗಳಲ್ಲಿ ಜಿಲ್ಲಾಸ್ಪತ್ರೆಯಲ್ಲಿಯೇ ಕೀಮೋಥೆರಫಿ ಸೌಲಭ್ಯ ಆರಂಭವಾಗಲಿದೆ. ಮಾರ್ಚ್ ತಿಂಗಳಲ್ಲಿ ಗೃಹ ಆರೋಗ್ಯ ಕರ್ನಾಟಕ ಕಾರ್ಯಕ್ರಮದಡಿ ಮನೆ-ಮನೆ ಭೇಟಿ ನೀಡಿ ಸಾಂಕ್ರಮಿಕ ರೋಗಗಳ ತಪಾಸಣೆ ಕೈಗೊಳ್ಳಲಾಗುವುದು. ಸಾರ್ವಜನಿಕರು ಜಾಗೃಕರಾಗಿ ಕ್ಯಾನ್ಸರ್ ಲಕ್ಷಣಗಳಿನುಸಾರವಾಗಿ ತಪಾಸಣೆಗೆ ಒಳಪಟ್ಟು ಕ್ಯಾನ್ಸರ್ ಮುಕ್ತ ಸಮಾಜ ನಿರ್ಮಿಸಲು ಕೈಜೋಡಿಸಬೇಕು ಎಂದು ತಿಳಿಸಿದರು.

ಅರಿವು ಮೂಡಿಸಿದ ಜಾಥಾ: ಜನ ಜಾಗೃತಿ ಜಾಥಾವು ಡಿಎಚ್‌ಒ ಕಚೇರಿಯಿಂದ ಆರಂಭಗೊಂಡು ಜಿಲ್ಲಾಧಿಕಾರಿಗಳ ಕಚೇರಿ ಮಾರ್ಗವಾಗಿ ಮರಳಿ ಗಡಿಗಿ ಚೆನ್ನಪ್ಪ ವೃತ್ತ ಮೂಲಕ ಡಿಎಚ್‌ಒ ಕಚೇರಿ ಆವರಣದವರೆಗೆ ಮರಳಿತು. ದಾರಿಯುದ್ದಕ್ಕೂ ಘೋಷಣೆ ಹಾಕುತ್ತಾ ಕ್ಯಾನ್ಸರ್ ರೋಗದ ಕುರಿತು ಅರಿವು ಮೂಡಿಸಲಾಯಿತು. ಇದೇ ವೇಳೆ ಕ್ಯಾನ್ಸರ್ ಕುರಿತ ಜಾಗೃತಿ ಭಿತ್ತಿಪತ್ರಗಳನ್ನು ಬಿಡುಗಡೆಗೊಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net