ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ

20-msk-1
ಮಸ್ಕಿಯ ಭ್ರಮರಾಂಬ ದೇವಸ್ಥಾನದಲ್ಲಿ ಸರ್ಕಾರಿ ನೌಕರರ ಸಮಾವೇಶ ಮತ್ತು ನೂತನ ಪದಧಿಕಾರಿಗಳ ಪದಗ್ರಹಣ ಸಮಾರಂಭವನ್ನು ತಹಸೀಲ್ದಾರ್ ಡಾ.ಮಲ್ಲಪ್ಪ ಕೆ.ಯರಗೋಳ ಉದ್ಘಾಟಿಸಿದರು. ಪ್ರಮುಖರಾದ ಮಲ್ಲಯ್ಯ ಅಂಬಾಡಿ, ಕೃಷ್ಣಪ್ಪ ಎಸ್., ಬಸನಗೌಡ ಪೊಲೀಸ್ ಪಾಟೀಲ್, ಸಿ.ದಾನಪ್ಪ, ದೊಡ್ಡಪ್ಪ ಮುರಾರಿ, ಮಸ್ಕಿ ತಾಲೂಕು ನೌಕರರ ಸಂಘದ ಅಧ್ಯಕ್ಷ ಪಂಪಾಪತಿ ಹೂಗಾರ ಇದ್ದರು.
Published on

ಮಸ್ಕಿ: ಸರ್ಕಾರಿ ನೌಕರರು ಸಾರ್ವಜನಿಕರ ಸೇವಕರು. ಜನರ ಸಮಸ್ಯೆಗಳಿಗೆ ಸ್ಪಂದಿಸಿದರೆ ನಮ್ಮ ಸೇವೆ ಸಾರ್ಥಕವಾಗುತ್ತದೆ ಎಂದು ತಹಸೀಲ್ದಾರ್ ಡಾ.ಮಲ್ಲಪ್ಪ ಕೆ.ಯರಗೋಳ ಹೇಳಿದರು.

ಪಟ್ಟಣದ ಭ್ರಮರಾಂಬ ದೇವಸ್ಥಾನದಲ್ಲಿ ಮಂಗಳವಾರ ಆಯೋಜಿಸಿದ್ದ ಸರ್ಕಾರಿ ನೌಕರರ ಸಮಾವೇಶ ಮತ್ತು ನೂತನ ಪದಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು. ಸರ್ಕಾರ ನಮಗೆ ಸಾರ್ವಜನಿಕರ ಕೆಲಸ ಮಾಡಲು ವೇತನ ನೀಡುತ್ತದೆ. ಅದಕ್ಕೆ ನ್ಯಾಯ ಒದಗಿಸಲು ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು.

ಸರ್ಕಾರದ ಯೋಜನೆಗಳು ಯಶಸ್ವಿಯಾಗಲು ಸರ್ಕಾರಿ ನೌಕರರ ಪಾತ್ರ ಬಹುಮುಖ್ಯವಾಗಿದ್ದು, ಜನರಿಗೆ ತಲುಪಿಸಬೇಕು. ಸರ್ಕಾರಿ ನೌಕರರ ಹಿತ ಕಾಪಾಡಲು ನೌಕರರ ಸಂಘದ ಪದಾಧಿಕಾರಿಗಳು ಶ್ರಮಿಸಬೇಕು ಎಂದರು. ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಕೃಷ್ಣಪ್ಪ ಎಸ್., ಕಾಂಗ್ರೆಸ್ ಮುಖಂಡ ಬಸನಗೌಡ ಪೊಲೀಸ್ ಪಾಟೀಲ್, ಸಾಹಿತಿ ಸಿ.ದಾನಪ್ಪ, ದೊಡ್ಡಪ್ಪ ಮುರಾರಿ, ಮಸ್ಕಿ ತಾಲೂಕು ನೌಕರರ ಸಂಘದ ಅಧ್ಯಕ್ಷ ಪಂಪಾಪತಿ ಹೂಗಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net