ಪಿಣರಾಯಿ ಸರ್ಕಾರದಿಂದ ಜನತೆಗೆ ಸಂಕಷ್ಟ: ಅಶ್ವಿನಿ ಎಂ.ಎಲ್. ಆರೋಪ

Ksd_Ashwini
Published on

ಕಾಸರಗೋಡು: ಪಿಣರಾಯಿ ವಿಜಯನ್ ನೇತೃತ್ವದ ಕೇರಳದ ಎಡರಂಗ ಸರ್ಕಾರ ಪಡಿತರ ವಿತರಕರಿಗೆ ನೀಡಬೇಕಾದ ಬಾಕಿ ಹಣವನ್ನು ಪಾವತಿಸದೆ, ಆಹಾರ ವಿತರಣಾ ವ್ಯವಸ್ಥೆಯನ್ನು ಬುಡಮೇಲುಗೊಳಿಸಲು ಯತ್ನಿಸುತ್ತಿದೆ ಎಂದು ಮಹಿಳಾ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯೆ ಅಶ್ವಿನಿ ಎಂ.ಎಲ್. ಆರೋಪಿಸಿದ್ದಾರೆ.

ವಿತರಕರು ತಮ್ಮ ಬಾಕಿ ಹಣವನ್ನು ಸಂಪೂರ್ಣವಾಗಿ ಪಾವತಿಸದ ಹಿನ್ನೆಲೆಯಲ್ಲಿ ಜನವರಿ ಮೊದಲ ವಾರದಲ್ಲಿ ಅಕ್ಕಿ, ಗೋಧಿ, ಹಿಟ್ಟು ಮುಂತಾದ ಅಗತ್ಯ ವಸ್ತುಗಳ ವಿತರಣೆ ಸ್ಥಗಿತಗೊಳ್ಳುವಂತಾಗಿದೆ. ಪಡಿತರ ಲಭ್ಯವಾಗದೆ, ಜನರು ಮಾರುಕಟ್ಟೆಯಿಂದ ಹೆಚ್ಚಿನ ದರದಲ್ಲಿ ಈ ವಸ್ತುಗಳನ್ನು ಖರೀದಿಸುವ ಪರಿಸ್ಥಿತಿ ಎದುರಾಗಿದ್ದು, ಇದರಿಂದ ಜನಸಾಮಾನ್ಯರ ಕುಟುಂಬದ ಬಜೆಟ್ ಅಸ್ತವ್ಯಸ್ತವಾಗಿದೆ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net