ಇ-ಕೆವೈಸಿ ನೋಂದಣಿಗೆ ಮುಗಿಬಿದ್ದ ಜನರು

DEC. 28, HNP., PH.3.
ಹೊಳೆನರಸೀಪುರ ಪಟ್ಟಣದ ಕಪಿಲಾ ಗ್ಯಾಸ್ ಏಜೆನ್ಸಿ ಎದುರು ನಿಂತಿದ್ದ ಗ್ರಾಹಕರು.
Published on

ಹೊಳೆನರಸೀಪುರ: ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರು ಇ-ಕೆವೈಸಿ ಮಾಡಿಸಬೇಕು ಎಂಬ ಮಾಹಿತಿ ಹರಿದಾಡಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಗ್ರಾಹಕರು ಗ್ಯಾಸ್ ಏಜೆನ್ಸಿ ಎದುರು ಮುಂಜಾನೆ 4 ಗಂಟೆಯಿಂದಲೇ ಕಾದು ಕುಳಿತಿದ್ದರು.

ಡಿ.31ರೊಳಗೆ ಇ-ಕೆವೈಸಿ ಮಾಡಿಸದಿದ್ದಲ್ಲಿ ಸೌಲಭ್ಯಗಳು ದೊರೆಯುವುದಿಲ್ಲ ಎಂಬ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಹಾಗಾಗಿ ನೂರಾರು ಜನರು ಪಟ್ಟಣದ ಕಪಿಲಾ ಗ್ಯಾಸ್ ಏಜೆನ್ಸಿ ಎದುರು ಜಮಾಯಿಸಿದ್ದರು. ನೋಂದಣಿ ಮಾಡಿಸಲು ನಾ ಮುಂದು ತಾ ಮುಂದು ಎಂದು ಮುಗಿಬಿದ್ದರು. ಆದರೆ, ಇ-ಕೆವೈಸಿ ನೋಂದಣಿಗೆ ಯಾವುದೇ ದಿನಾಂಕ ನಿಗದಿ ಮಾಡಿಲ್ಲ ಎಂದು ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net