ಗೃಹಲಕ್ಷ್ಮೀ ನೋಂದಣಿಗೆ ಮುಗಿಬಿದ್ದ ಜನ

24 Alnvr 1
Published on

ಅಳ್ನಾವರ: ಕಳೆದ ಮೂರು ದಿನಗಳಿಂದ ಆರಂಭಗೊಂಡಿರುವ ಗೃಹಲಕ್ಷ್ಮೀ ಯೋಜನೆಯ ನೋಂದಣಿಗೆ ಸೋಮವಾರ ಬೆಳಗ್ಗೆ ಪಟ್ಟಣ ಪಂಚಾಯಿತಿ ಕಚೇರಿಗೆ ಮುಗಿಬಿದ್ದ ಸಾರ್ವಜನಿಕರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಮತ್ತೊಂದೆಡೆ ಸತತವಾಗಿ ಸುರಿಯುತ್ತಿರುವ ಮಳೆಯನ್ನೂ ಲೆಕ್ಕಿಸದೇ ಸಾರ್ವಜನಿಕರು ಗೃಹಲಕ್ಷ್ಮೀ ನೋಂದಣಿಗಾಗಿ ಪರದಾಡಿದರು. ಇದೆಲ್ಲವನ್ನೂ ಗಮನಿಸಿದ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಮಂಗಳವಾರದಿಂದ ಬೆಳಗ್ಗೆ 9 ರಿಂದ 10 ಗಂಟೆವರೆಗೆ ಸಂಖ್ಯೆಯ ಟೋಕನ್ ನೀಡಿ ನಿತ್ಯ 150 ಜನರು ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net