ಜಲವೈಭವ ಕಣ್ತುಂಬಿಕೊಂಡ ಜನರು

16 mlv 1.
Published on

ಮಳವಳ್ಳಿ : ತಾಲೂಕಿನ ಶಿವನಸಮುದ್ರದ (ಬ್ಲಫ್) ಗಗನಚುಕ್ಕಿ ಜಲಪಾತೋತ್ಸವಕ್ಕೆ ನಗರ ಪ್ರದೇಶಗಳಿಂದ ಪ್ರವಾಸಿಗರು ಆಗಮಿಸಿ ಜಲವೈಭವ ಸೊಬಗನ್ನು ಕಣ್ತುಂಬಿಕೊಳ್ಳುವುದರ ಜತೆಗೆ ವೇದಿಕೆಯಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಗಳ ರಸದೌತಣವನ್ನು ಸವಿದರು.


ಜಲಪಾತೋತ್ಸವದ ಹಿನ್ನೆಲೆಯಲ್ಲಿ ಗಗನಚುಕ್ಕಿ ಜಲಪಾತದ ಸಮೀಪದಲ್ಲಿ ಹಾಕಿರುವ ಬೃಹತ್ ವೇದಿಕೆಯಲ್ಲಿ ಬೆಳಗ್ಗೆ 11 ಗಂಟೆಯಿಂದ ಸ್ಥಳೀಯ ಕಲಾವಿದರಿಂದ ಜಾನಪದ ಹಾಗೂ ಭಕ್ತಿ ಗೀತೆಗಳು, ಕಲಾವಿದರ ತಂಡಗಳಿಂದ ವಿವಿಧ ಕಾರ್ಯಕ್ರಮವನ್ನು ನಡೆಸಿಕೊಡುವ ಮೂಲಕ ವೇದಿಕೆ ಮುಂಭಾಗದಲ್ಲಿ ನೆರೆದಿದ್ದ ಜನರನ್ನು ರಂಜಿಸಿದರು.


ಸ್ಥಳೀಯ ಶಾಸಕ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಬೆಳಗಿನಿಂದ ಕಾರ್ಯಕ್ರಮ ನಡೆಯುವ ವೇದಿಕೆ ಬಳಿ ಹಾಜರಿದ್ದು, ಜಲಪಾತೋತ್ಸವ ಸಮಾರಂಭಕ್ಕೆ ವೀಕ್ಷಣೆಗೆ ಆಗಮಿಸುತ್ತಿದ್ದ ಸಾರ್ವಜನಿಕರಿಗೆ ತಿಂಡಿ, ಊಟದ ವ್ಯವಸ್ಥೆಗಳನ್ನು ಹಾಗೂ ತಾಲೂಕಿನ ವಿವಿಧ ಗ್ರಾಮಗಳಿಂದ ಬುರುವ ಜನರಿಗೆ ಉಚಿತ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net