ಕಾಂಗ್ರೆಸ್ ಆಡಳಿತಕ್ಕೆ ಜನರ ಬಹುಪಾರಕ್

25Koppa01
Published on

ಕೊಪ್ಪ: ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಉತ್ತಮ ಆಡಳಿತ ನಡೆಸುತ್ತಿದೆ ಎಂಬವುದಕ್ಕೆ ಮೂರು ಉಪಚುನಾವಣೆಗಳ ಗೆಲುವು ಸಾಕ್ಷಿಯಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಕ್ಕುಡಿಗೆ ರವೀಂದ್ರ ಹೇಳಿದರು.

ಪಟ್ಟಣದ ಬಸ್‌ನಿಲ್ದಾಣದ ಆವರಣದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ವಿಜಯೋತ್ಸವದಲ್ಲಿ ಮಾತನಾಡಿದ ಅವರು, ಸರ್ಕಾರದ ಐದು ಗ್ಯಾರಂಟಿಗಳನ್ನು ಜನರು ಒಪ್ಪಿದ್ದಾರೆ. ಬಿಜೆಪಿಯ ಸುಳ್ಳು ಮತ್ತು ಅಪಪ್ರಚಾರಕ್ಕೆ ಮೂರು ಮತ ಕ್ಷೇತ್ರದ ಜನತೆ ಸರಿಯಾದ ಉತ್ತರ ನೀಡಿದ್ದಾರೆ. ಮುಂದಿನ ಮೂರು ವರ್ಷ ಅಭಿವೃದ್ಧಿಯ ಪರ್ವ ನಡೆಯಲಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಮುರೊಳ್ಳಿ ಮಾತನಾಡಿ, ಬಿಜೆಪಿ ಮತ್ತು ಜೆಡಿಎಸ್‌ನ ಮೈತ್ರ ಮಕಾಡೆ ಮಲಗಿದೆ. ಇಬ್ಬರು ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲಾಗಿದೆ. ಜಾರ್ಖಂಡ್‌ನಲ್ಲಿ ಇಂಡಿಯಾ ಮೈತ್ರಿಕೂಟ ಗೆದ್ದಿದೆ ಎಂದು ತಿಳಿಸಿದರು.

ಓಣಿತೋಟ ರತ್ನಾಕರ್, ನವೀನ್ ಮಾವಿನಕಟ್ಟೆ, ನುಗ್ಗಿ ಮಂಜುನಾಥ್, ಸಂದೇಶ್, ರಜಿತ್ ಗೌಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net