ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ

BATKAL RAIN
Published on

ಭಟ್ಕಳ: ಎರಡು ದಿನಗಳಿಂದ ಪಟ್ಟಣದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಅಲ್ಲದೆ, ತಗ್ಗು ಪ್ರದೇಶಗಳು ಜಲಾವೃತ್ತಗೊಂಡು ಸಾರ್ವಜನಿಕರು ತೊಂದರೆ ಅನುಭವಿಸಿದರು.

ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಶನಿವಾರವು ಮುಂದುವರಿದಿದೆ. ಮಳೆಗಾಲದಲ್ಲಿ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಇಲ್ಲದ್ದರಿಂದ ಶಂಶುದ್ದೀನ್ ಸರ್ಕಲ್ ಹಾಗೂ ಸರ್ಪನಕಟ್ಟೆಯಲ್ಲಿ ಹೆದ್ದಾರಿ ಮೇಲೆ ನೀರು ನಿಂತು ವಾಹನ ಸಂಚಾರಕ್ಕೆ ಟಡಚಣೆಯಾಯಿತು. ಹಲವೆಡೆ ಚರಂಡಿ ನೀರು ರಸ್ತೆ ಮೇಲೆ ಹರಿದಿದ್ದರಿಂದ ರಸ್ತೆಗಳೆಲ್ಲ ಕೆಸರಿನ ಗದ್ದೆಯಂತಾಗಿದೆ. ರಸ್ತೆ ತುಂಬಾ ತಾಜ್ಯಗಳು ಬಂದು ಬಿದ್ದಿದ್ದು ಮಳೆ ನಿಂತ ಬಳಿಕವೂ ಜನರು ನಡೆದಾಡಲು ಹರಸಾಹಸ ಪಡುವಂತಾಗಿದೆ. ಪಟ್ಟಣದ ಒಳಚರಂಡಿ ಕಾಮಗಾರಿಯಿಂದಾಗಿ ಅಲ್ಲಲ್ಲಿ ರಸ್ತೆಗಳಲ್ಲಿ ಮಣ್ಣು ಕುಸಿದು ವಾಹನಗಳು ರಸ್ತೆಯಲ್ಲಿ ಹುಗಿದು ಹೋಗಿದ್ದವು. ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಿಂದಿ ಕಾಲನಿಯಲ್ಲಿ ಶಾಲಾ ವಾಹನವೊಂದು ಮಣ್ಣಲ್ಲಿ ಹೂತು ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲೆಗೆ ಹೋಗಲು ಸಾಧ್ಯವಾಗದೆ ಪರದಾಡಿದರು.

ಈ ಬಾರಿ ಪುರಸಭೆಯಿಂದ ಸಮರ್ಪಕವಾಗಿ ಚರಂಡಿ ಹೂಳೆತ್ತದ ಕಾರಣ ಮಳೆ ನೀರು ಮಣ್ಕುಳಿ ಭಾಗದಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿ ಹಾನಿಯಾಗಿದೆ. ಭಟ್ಕಳದಲ್ಲಿ ಮತ್ತೆ ಮಳೆ ಆರ್ಭಟ ಮುಂದುವರಿದಿದ್ದು, ಮನೆ, ಆಸ್ತಿ-ಪಾಸ್ತಿ ಹಾನಿಯಾದ ಬಗ್ಗೆ ಯಾವುದೇ ಮಾಹಿತಿ ಇಲ್ಲ ಬಂದಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net