

ವಿರಾಜಪೇಟೆ: ಶಾಸಕ ಕೆ.ಜಿ.ಬೋಪಯ್ಯ ನೇತೃತ್ವದ ತಂಡ ಗುರುವಾರ ಪಟ್ಟಣದಲ್ಲಿ ಜನಜಾಗೃತಿ ಅಭಿಯಾನ ಮಾಡುವ ಮೂಲಕ ಅಲ್ಪಸಂಖ್ಯಾತರಿಗೆ ಪೌರತ್ವ ಕಾಯ್ದೆ ತಿದ್ದುಪಡಿ ಬಗ್ಗೆ ಮನವರಿಕೆ ಮಾಡಿತು.
ಪಾಕಿಸ್ತಾನ, ಅಪ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಶೋಷಣೆಗೊಳಗಾಗಿ ೨೦೧೪ರ ಡಿಸೆಂಬರ್‌ನಲ್ಲಿ ಭಾರತಕ್ಕೆ ನಿರಾಶ್ರಿತರಾಗಿ ಬಂದ ಹಿಂದು, ಬೌದ್ಧ, ಸಿಖ್, ಪಾರ್ಸಿ, ಹಾಗೂ ಕ್ರೈಸ್ತರಿಗೆ ಪೌರತ್ವ ನೀಡಲು ಕಾಯ್ದೆಯನ್ನು ತಿದ್ದುಪಡಿ ಮಾಡಲಾಗಿದೆ. ಇದರಿಂದ ಭಾರತದಲ್ಲಿನ ಮುಸ್ಲಿಮರಿಗೆ ತೊಂದರೆ ಆಗುವುದಿಲ್ಲ ಎಂದು ತಂಡದ ಸದಸ್ಯರು ತಿಳಿಹೇಳಿದರು.
ಅಸ್ಸಾಂನಲ್ಲಿ ಮಾತ್ರ ಎನ್‌ಆರ್‌ಸಿ ಜಾರಿ ಮಾಡಲಾಗಿದೆ. ಈ ವಿಚಾರದಲ್ಲಿ ಕೆಲವರು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಹಾಗು ರಾಜ್ಯ ಸರ್ಕಾರ ಅಲ್ಪಸಂಖ್ಯಾತರಿಗೆ ಹಲವಾರು ಯೋಜನೆಗಳನ್ನು ನೀಡಿದೆ. ಅದನ್ನು ಸದುಪಯೋಗ ಪಡಿಸಿಕೊಳ್ಳಿ ಮನವಿ ಮಾಡಿದರು.
ಬಹುತೇಕ ಅಲ್ಪಸಂಖ್ಯಾತರಿಗೆ ಕಾಯ್ದೆಯ ಬಗ್ಗೆ ಮಾಹಿತಿ ಕೊರತೆ ಕಂಡು ಬಂತು. ಬಹುತೇಕ ಪ್ರಶ್ನೆಗಳಿಗೆ ಶಾಸಕರ ತಂಡ ಉತ್ತರ ನೀಡಲು ಸಾದ್ಯವಾಗಲಿಲ್ಲ. ಪರಿಣಾಮ ಜಾಗೃತಿ ಕೊರತೆ ಎದ್ದು ಕಾಣುತ್ತಿತ್ತು.
ತಾಲೂಕು ಪಂಚಾಯಿತಿ ಅಧ್ಯಕ್ಷೆ ಸ್ಮೀತಾ ಪ್ರಕಾಶ್, ಕಾಫಿ ಮಂಡಳಿ ಉಪಾಧ್ಯಕ್ಷೆ ರೀನಾಪ್ರಕಾಶ್, ಜಿಲ್ಲಾ ಪಂಚಾಯಿತಿ ಸದಸ್ಯ ಅಚ್ಚಪಂಡ ಮಹೇಶ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಯಮುನಾ ನಾಣಯ್ಯ, ತಾಲೂಕು ಅಧ್ಯಕ್ಷ ನೆಲ್ಲಿರ ಚಲನ್, ಪಟ್ಟಣ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.