ಮೇ.30ರಂದು ಹಾಸನದಲ್ಲಿ ಬೃಹತ್ ಪ್ರತಿಭಟನೆ: ರೈತ ನಾಯಕಿ ಸುನಂದಾ ಜಯರಾಂ ಮಾಹಿತಿ

Peoples Movement Union Press Conference Mandya
Published on

ಮಂಡ್ಯ: ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪರ ಚಳವಳಿಗಳ ಒಕ್ಕೂಟದಿಂದ ಮೇ.30ರಂದು ‘ನಮ್ಮೆಲ್ಲರ ಹೋರಾಟದ ನಡಿಗೆ ಹಾಸನದ ಕಡೆಗೆ’ ಶೀರ್ಷಿಕೆಯಡಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ನಾಯಕಿ ಸುನಂದಾ ಜಯರಾಂ ತಿಳಿಸಿದರು.

ಪ್ರಜ್ವಲ್ ರೇವಣ್ಣ ರಾಜಕೀಯ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಮಹಿಳೆಯರನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡಿದ್ದಾರೆ. ಅವರ ಹಲವು ಬಗೆಯ ಚಿತ್ರಣವನ್ನು ವಿಡಿಯೋ ಮಾಡಿಟ್ಟುಕೊಂಡಿದ್ದು ಘೋರ ಅಪರಾಧ. ಆದ್ದರಿಂದ ಆತನನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಅಂದು ಹಾಸನದ ಹೇಮಾವತಿ ಪ್ರತಿಮೆಯ ಬಳಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಜತೆಗೆ ಬಹಿರಂಗ ಸಭೆಯನ್ನು ನಡೆಸಲಾಗುವುದು. ಆದ್ದರಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಜನವಾದಿ ಸಂಘಟನೆಯ ದೇವಿ, ದಲಿತ ಸಂಘರ್ಷ ಸಮಿತಿ ಮುಖಂಡ ಗುರುಪ್ರಸಾದ್ ಕೆರಗೋಡು, ಸಿಐಟಿಯುನ ಪುಟ್ಟಮಾಧು, ಸಿ.ಕುಮಾರಿ, ಪೂರ್ಣಿಮಾ, ಸುನೀತಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net