ಶಾಸಕ ಪೊನ್ನಣ್ಣ ಕಾಳಜಿಗೆ ಜನಪ್ರತಿನಿಧಿಗಳ ಮೆಚ್ಚುಗೆ

oplus_0
ಮಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಂಡಿ ಭಾಗದ ರಸ್ತೆ ಕಾಮಗಾರಿ ಪ್ರಗತಿಯಲ್ಲಿರುವುದು.
Published on

ಸಿದ್ದಾಪುರ: ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಅಂದಾಜು 30 ಲಕ್ಷ ರೂ. ನೀಡಿ ನುಡಿದಂತೆ ನಡೆದ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಕಾಳಜಿಗೆ ಸ್ಥಳೀಯ ಜನಪ್ರತಿನಿಧಿಗಳು ಗುರುವಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಮಾಲ್ದಾರೆ ಸುತ್ತಮುತ್ತಲ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗ ರಸ್ತೆಗಳ ಅಭಿವೃದ್ಧಿಪಡಿಸುವ ಭರವಸೆ ನೀಡಿದ್ದ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಇದೀಗ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಸ್ತೆ ಅಭಿವೃದ್ಧಿಗೆ 30 ಲಕ್ಷ ರೂ. ಅನುದಾನ ನೀಡಿದ ಹಿನ್ನೆಲೆಯಲ್ಲಿ ಇದೀಗ ಗ್ರಾಮೀಣ ಭಾಗದ ರಸ್ತೆಗಳು ಅಭಿವೃದ್ಧಿಯಾಗುತ್ತಿವೆ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಜಿ ತೋಮಸ್ ತಿಳಿಸಿದ್ದಾರೆ.

ಪಂಚಾಯಿತಿ ವ್ಯಾಪ್ತಿಯ ಹುಂಡಿ ಭಾಗದ ರಸ್ತೆ ಅಭಿವೃದ್ಧಿಗೆ 15 ಲಕ್ಷ ರೂ., ಮಟ್ಟ ಬಾಣಂಗಾಲ ರಸ್ತೆ ಅಭಿವೃದ್ಧಿಗೆ 5 ಲಕ್ಷ ರೂ., ಮಾಲ್ದಾರೆ ಮಾರ್ಗೊಳ್ಳಿ ರಸ್ತೆ ಅಭಿವೃದ್ಧಿಗೆ 5 ಲಕ್ಷ ರೂ., ಮಾಲ್ದಾರೆ ಗುಡ್ಲೂರು ರಸ್ತೆ ಅಭಿವೃದ್ಧಿಗೆ 5 ಲಕ್ಷ ರೂ. ಸೇರಿ ಒಟ್ಟು 30 ಲಕ್ಷ ರೂ. ಅನುದಾನ ನೀಡಿದ್ದಾರೆ.
ಮಳೆಯ ಕಾರಣದಿಂದ ರಸ್ತೆ ಅಭಿವೃದ್ಧಿ ಕಾರ್ಯ ವಿಳಂಬವಾಗಿತ್ತು. ಇದೀಗ ರಸ್ತೆ ಕಾಮಗಾರಿಗಳು ಮುಂದುವರಿದಿದ್ದು ಕೆಲವೇ ದಿನಗಳಲ್ಲಿ ಸುಗಮ ಸಂಚಾರವಾಗಲಿದೆ ಎಂದರು.

ಮಾಲ್ದಾರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲತಿ ಅವರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಿ ಶಾಸಕರು ಸಹಕರಿಸಿದ್ದಾರೆ. ಮತ್ತಷ್ಟು ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡಬೇಕೆಂದು ಮನವಿ ಮಾಡಿದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಮೀರ್, ಗ್ರಾಮ ಪಂಚಾಯಿತಿ ಸದಸ್ಯ ಮೊಹಮ್ಮದ್ ಅಲಿ ಸೇರಿದಂತೆ ಸ್ಥಳೀಯರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net