ಹುಬ್ಬಳ್ಳಿ : ವಿಧಾನಸಭೆಯ ಅಧಿವೇಶನದಲ್ಲಿ ಶೇ. 100 ರಷ್ಟು ಹಾಜರಾತಿಯೊಂದಿಗೆ ಸಮಯಕ್ಕೆ ಸರಿಯಾಗಿ ಹಾಜರಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರ್ರಲ್ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಅವರನ್ನು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಬೆಂಗಳೂರಿನಲ್ಲಿ ಗುರುವಾರ ಅಭಿನಂದಿಸಿದರು.