ಪೆರಡಾಲ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ

New Project (4)
Published on

ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ ಭಾನುವಾರ ಪೆರಡಾಲ ಶ್ರೀ ಉದನೇಶ್ವರ ಸಭಾಭವನದಲ್ಲಿ ಜರುಗಿತು.

ಅಗಲ್ಪಾಡಿ ಶ್ರೀ ಅನ್ನಪೂಣೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಉಪ್ಪಂಗಳ ವಾಸುದೇವ ಭಟ್ ಉದ್ಘಾಟಿಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ವಸಂತ ಪೈ ಬದಿಯಡ್ಕ ಅಧ್ಯಕ್ಷತೆ ವಹಿಸಿದ್ದರು.

ಅರ್ಚಕ ಯೋಗೀಶ್ ಕಡಮಣ್ಣಾಯ, ಕೃಷ್ಣಯ್ಯ ಬಲ್ಲಾಳ್ ಕೊಡ್ಯಮೆ ಅರಮನೆ, ವಾಸುದೇವ ಕೊಳತ್ತಾಯ, ಚಂದ್ರಹಾಸ ರೈ ಪೆರಡಾಲಗುತ್ತು, ಟಿ.ಕೆ.ನಾರಾಯಣ ಭಟ್ ಪಂಜಿತ್ತಡ್ಕ, ಅರ್ಚಕ ಶಿವರಾಮ ಭಟ್ ಕಿಳಿಂಗಾರು, ಮೊಕ್ತೇಸರ ಜಗನ್ನಾಥ ರೈ ಪೆರಡಾಲಗುತ್ತು, ಮೊಕ್ತೇಸರ ಸೀತಾರಾಮ ನವಕಾನ, ಗೋಪಾಲ ಭಟ್ ಪಟ್ಟಾಜೆ, ಪ್ರೊ.ಶ್ರೀನಾಥ್ ಎ., ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಸೂರ್ಯನಾರಾಯಣ ಬಿ., ಯುವ ಸಮಿತಿ ಪ್ರಧಾನ ಕಾರ್ಯದರ್ಶಿ ಭಾಸ್ಕರ ಪಂಜಿತ್ತಡ್ಕ, ಜೀರ್ಣೋದ್ಧಾರ ಸಮಿತಿ ಜತೆ ಕಾರ್ಯದರ್ಶಿಗಳಾದ ಗಣೇಶ್ ಪ್ರಸಾದ ಕಡಪ್ಪು, ಉದಯಶಂಕರ ಪಿ.ಎಸ್., ಲೆಕ್ಕಪರಿಶೋಧಕ ಸತೀಶ ಕುಮಾರ ಪುದ್ಯೋಡು ಮೊದಲಾದವರಿದ್ದರು.

ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ನಿರಂಜನ ರೈ ಪೆರಡಾಲ ಸ್ವಾಗತಿಸಿದರು. ಆಡಳಿತ ಮೊಕ್ತೇಸರ ವೆಂಕಟ್ರಮಣ ಭಟ್ ಚಂಬಲ್ತಿಮಾರು ಪ್ರಸ್ತಾವನೆಗೈದರು. ವೆಂಕಟೇಶ್ವರ ಭಟ್ಟ ಪಟ್ಟಾಜೆ ಪ್ರಾರ್ಥನೆ ಹಾಡಿದರು. ಯುವ ವಿಭಾಗದ ಡಾ.ಶ್ರೀಶ ಕುಮಾರ ಪಂಜಿತ್ತಡ್ಕ ನಿರೂಪಿಸಿದರು. ಮೊಕ್ತೇಸರ ಕೃಷ್ಣ ಬದಿಯಡ್ಕ ವಂದಿಸಿದರು.

ಬ್ರಹ್ಮಕಲಶೋತ್ಸವ ಸಮಿತಿ ರಚನೆ

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಬಿ.ವಸಂತ ಪೈ ಬದಿಯಡ್ಕ, ಕಾರ್ಯಾಧ್ಯಕ್ಷ ಜಗನ್ನಾಥ ರೈ ಪೆರಡಾಲಗುತ್ತು, ಪ್ರಧಾನ ಕಾರ್ಯದರ್ಶಿಯಾಗಿ ನಿರಂಜನ ರೈ ಪೆರಡಾಲ, ಕೋಶಾಧಿಕಾರಿಯಾಗಿ ಸೂರ್ಯನಾರಾಯಣ ಬಿ. ಹಾಗೂ ಇತರ ಉಪಸಮಿತಿಗಳನ್ನು ರಚಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net