ಯೋಗದಿಂದ ಆರೋಗ್ಯದಲ್ಲಿ ಪರಿಪೂರ್ಣತೆ ಸಾಧ್ಯ

mng_24 jul halu okkuta
ದ.ಕ.ಹಾಲು ಒಕ್ಕೂಟ ಹಾಗೂ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಸಹಯೋಗದಲ್ಲಿ ವಿಶ್ವ ಯೋಗದಿನಾಚರಣೆ ಕಾರ್ಯಕ್ರಮ ನಡೆಯಿತು. ದ.ಕ.ಹಾಲು ಒಕ್ಕೂಟದ ಉಪಾಧ್ಯಕ್ಷ ಜಯರಾಮ್ ರೈ ಬಳಜ್ಜ, ವ್ಯವಸ್ಥಾಪಕ ನಿರ್ದೇಶಕರಾದ ವಿವೇಕ್. ಡಿ., ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.
Published on

ಮಂಗಳೂರು: ಯೋಗವನ್ನು ನಿರಂತರವಾಗಿ ಅಭ್ಯಸಿಸುವುದರಿಂದ ಆರೋಗ್ಯದಲ್ಲಿ ಪರಿಪೂರ್ಣತೆ ಹೊಂದಲು ಸಾಧ್ಯ.ಯೋಗವನ್ನು ಇಡೀ ವಿಶ್ವವೇ ಆರೋಗ್ಯಯುತ ಜೀವನಕ್ಕೆ ಉತ್ತಮ ಹಾದಿ ಎಂಬುದನ್ನು ಒಪ್ಪಿಕೊಂಡಿದೆ.ಈ ನಿಟ್ಟಿನಲ್ಲಿ ದಿನಚರಿಯಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ದ.ಕ.ಹಾಲು ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ ಹೇಳಿದರು.

ದ.ಕ.ಹಾಲು ಒಕ್ಕೂಟ ಹಾಗೂ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಸಹಯೋಗದಲ್ಲಿ ನಡೆದ ವಿಶ್ವ ಯೋಗದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಯೋಗ ಎಂಬುದು ನಮ್ಮ ಜ್ಞಾನದ ಅಭಿವೃದ್ಧಿಗೆ ಪೂರಕಾವಾದ ಕ್ರಿಯೆ. ಯೋಗದಿಂದ ಏಕಾಗ್ರತೆ ಹೆಚ್ಚುವುದಲ್ಲದೆ ನಮ್ಮ ಮಾನಸಿಕ ಮತ್ತು ದೈಹಿಕ ಕ್ಷಮತೆ ಅಭಿವೃದ್ಧಿಯಾಗುತ್ತದೆ. ಯೋಗಕ್ಕಿರುವ ಅಗಾಧ ಶಕ್ತಿ ಬೇರೊಂದಿಲ್ಲ. ಸಣ್ಣ ಕಾಲಾವಧಿಯಲ್ಲೂ ಯೋಗ ಮಾಡಿ ನೆಮ್ಮದಿ ಪಡೆಯಬಹುದು. ಪರಿಪೂರ್ಣ ಜೀವನಕ್ಕೆ ಯೋಗ ಅತ್ಯಗತ್ಯವಾಗಿದ್ದು ಮಾನವ ಕುಲದ ಏಕತೆಯ ಪರಿಕಲ್ಪನೆಗೆ ಯೋಗ ಪ್ರಾಮುಖ್ಯತೆ ಪಡೆದಿದೆ ಎಂದರು.

ದ.ಕ.ಹಾಲು ಒಕ್ಕೂಟದ ಉಪಾಧ್ಯಕ್ಷ ಜಯರಾಮ್ ರೈ ಬಳಜ್ಜ, ವ್ಯವಸ್ಥಾಪಕ ನಿರ್ದೇಶಕರಾದ ವಿವೇಕ್. ಡಿ., ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net