

ಮಳೆಗಾಲದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಅಧಿಕಾರಿಗಳು ಕೆಲಸ ನಿರ್ವಹಿಸಬೇಕು ಎಂದು ಶಾಸಕ ಕೆ.ಹರೀಶ್‌ಗೌಡ ಅಧಿಕಾರಿಗಳಿಗೆ ಸೂಚಿಸಿದರು.
ಒಳ ಚರಂಡಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಸಂಬಂಧ ಸೋಮವಾರ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರು ಹಾಗೂ ವಾರ್ಡ್ ಅಧ್ಯಕ್ಷರನ್ನೊಳಗೊಂಡತೆ ಪಾಲಿಕೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಮಳೆಗಾಲದ ಹಿನ್ನೆಲೆಯಲ್ಲಿ ಚಾಮರಾಜ ಕ್ಷೇತ್ರದ ನಿವಾಸಿಗಳಿಗೆ ಯಾವುದೇ ರೀತಿಯ ತೊಂದರೆಯಾಗಬಾರದು. ಇಂದಿನಿಂದಲೇ ಎಲ್ಲ ಸಮಸ್ಯೆಗಳನ್ನು ತಿಳಿದು ಸಮಸ್ಯೆಗಳ ಬಗೆಹರಿಸುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಅಗತ್ಯವಿರುವ ಸಣ್ಣ ಪುಟ್ಟ ಕಾಮಗಾರಿಗಳನ್ನು ತಕ್ಷಣ ಮಾಡಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ವಾರ್ಡ್‌ವಾರು ಸಮಸ್ಯೆಗಳನ್ನು ಸುದೀರ್ಘವಾಗಿ ಚರ್ಚಿಸಿ ಕ್ರಮ ವಹಿಸುವಂತೆ ಸೂಚಿಸಿದರು.
ಆಯಾಯಾ ಇಲಾಖೆಗಳ ಅಧಿಕಾರಿಗಳು ತಮ್ಮ ಅಚ್ಚುಕಟ್ಟಿನಲ್ಲಿ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಸಾರ್ವಜನಿಕರಿಗೆ ಮೂಲ ಸೌಕರ್ಯಗಳ ಸಮಸ್ಯೆ ಆಗುವುದನ್ನು ನಾನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು. ಅಧಿಕಾರಿಗಳಾದ ಸಿಂಧು, ಅಶ್ವಿನಿ ಇತರರಿದ್ದರು.