ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಡಿಟಿಎಂಎನ್ ಸಾಧನೆ

10BTP01
ಬೆಟ್ಟದಪುರದ ಡಿಟಿಎಂಎನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಎಚ್.ವಿ ಗುಣಶ್ರೀ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 608 ಅಂಕಗಳನ್ನು ಪಡೆದು ತಾಲೂಕಿನ ಪ್ರಥಮ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಸಂಸ್ಥೆ ವತಿಯಿಂದ ಅಭಿನಂದಿಸಲಾಯಿತು. ಚಂದ್ರಶೇಖರ್, ನಟರಾಜ್, ವಿಜಯ್, ಮುರಳಿ, ಸತೀಶ್ ಇದ್ದರು.
Published on

ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಡಿಟಿಎಂಎನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದು, ವಿದ್ಯಾಸಂಸ್ಥೆ ಶೇ.100 ಫಲಿತಾಂಶ ಪಡೆದುಕೊಂಡಿದೆ.

ಒಟ್ಟು 80 ವಿದ್ಯಾರ್ಥಿಗಳು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಬರೆದಿದ್ದು, ಅದರಲ್ಲಿ 29 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 40 ವಿದ್ಯಾರ್ಥಿಗಳು ಪ್ರಥಮ ದರ್ಜೆ ಮತ್ತು 11 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ಎಚ್.ವಿ ಗುಣಶ್ರೀ 608 ಅಂಕಗಳನ್ನು ಪಡೆದುಕೊಂಡು ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡರೆ, ಡಿ.ನಿವಾಸ್ 594 ಅಂಕ ಮತ್ತು ದರ್ಶನ್ ರಾಜ್ 592 ಅಂಕಗಳನ್ನು ಪಡೆದಿದ್ದಾರೆ. ಕನ್ನಡ ಭಾಷೆ ವಿಷಯದಲ್ಲಿ ಆರು ಹಾಗೂ ಸಮಾಜ ವಿಜ್ಞಾನ ವಿಷಯದಲ್ಲಿ ಇಬ್ಬರು ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕಗಳನ್ನು ಪಡೆದು ಕೀರ್ತಿ ತಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net