ಜನರ ನಿರೀಕ್ಷೆ ಹುಸಿಯಾಗದಂತೆ ಕಾರ್ಯನಿರ್ವಹಣೆ

ಜನರ ನಿರೀಕ್ಷೆ ಹುಸಿಯಾಗದಂತೆ ಕಾರ್ಯನಿರ್ವಹಣೆ
Published on

ನಾಪೋಕ್ಲು: ಕೊಡಗು-ಮೈಸೂರು ಲೋಕಸಭಾ ಕ್ಷೇತ್ರ ಅತ್ಯಂತ ವಿಸ್ತಾರವಾದ ಕ್ಷೇತ್ರವಾಗಿದ್ದು, ಜಿಲ್ಲೆಯ ನಾಯಕರು ಹಾಗೂ ಕಾರ್ಯಕರ್ತರು ಚುನಾವಣೆ ಗೆಲುವಿಗಾಗಿ ಪ್ರಾಮಾಣಿಕ ಶ್ರಮ ಹಾಕಿದ್ದಾರೆ ಎಂದು ನೂತನ ಸಂಸದ ಯದುವೀರ್ ಒಡೆಯರ್ ಹೇಳಿದರು.

ನಾಪೋಕ್ಲು ಭಗವತಿ ಸನ್ನಿಧಿಯ ಸಮುದಾಯ ಭವನದಲ್ಲಿ ಶನಿವಾರ ನಡೆದ ಸಭೆಯಲ್ಲಿ ಮಾತನಾಡಿದರು. ತಲಕಾವೇರಿಯಲ್ಲಿ ಪೂಜೆ ಸಲ್ಲಿಸುವ ಮೂಲಕ ಪ್ರಚಾರ ಆರಂಭಿಸಲಾಗಿತ್ತು. ಗೆದ್ದ ನಂತರ ಪೂಜೆ ಸಲ್ಲಿಸಿದ್ದೇನೆ. ಚುನಾವಣೆ ಸಂದರ್ಭ ಯಾವ ರೀತಿ ಶ್ರಮ ಹಾಕಿದ್ದೆವೋ ಅದೇ ರೀತಿ ಮುಂದಿನ ಐದು ವರ್ಷಗಳಲ್ಲೂ ಶ್ರಮವಹಿಸಿ ಕೆಲಸಮಾಡಿ ಜನರ ನಿರೀಕ್ಷೆಗಳು ಹುಸಿಯಾಗದಂತೆ ನೋಡಿಕೊಳ್ಳುವೆ ಎಂದರು.

ನಾಪೋಕ್ಲು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಬಿಜೆಪಿ ಜಿಲ್ಲಾ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಎಂಎಲ್ಸಿ ಸುಜಾ ಕುಶಾಲಪ್ಪ, ವಿಧಾನಸಭಾ ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ, ರೀನಾ ಪ್ರಕಾಶ್, ಯಮುನಾ ಚಂಗಪ್ಪ, ಬಿದ್ದಾಟಂಡ ರಮೇಶ್ ಚಂಗಪ್ಪ, ನಾಗೇಶ್ ಕುಂದಲ್ಪಾಡಿ, ರಾಬಿನ್ ದೇವಯ್ಯ, ನೆಲ್ಲೀರ ಚಲನ್, ಮನು ಮುತ್ತಪ್ಪ, ಉಮೇಶ್ ಸುಬ್ರಮಣಿ, ಕೆಟೋಳಿರ ಹರೀಶ್ ಪೂವಯ್ಯ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net