ಪೆರ್ಲ-ಬೈಪಾಡಿ ಕ್ಷೇತ್ರ ಬ್ರಹ್ಮಕಲಶ ಆಮಂತ್ರಣ ಬಿಡುಗಡೆ

Published on

ಬೆಳ್ತಂಗಡಿ: ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಜ.7ರಿಂದ 12ರವರೆಗೆ ನಡೆಯಲಿದ್ದು, ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಬ್ರಹ್ಮಕಲಶೋತ್ಸವ ಆಮಂತ್ರಣ ಬಿಡುಗಡೆಗೊಳಿಸಿದರು.

ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕ ಬಾಲಕೃಷ್ಣ ಪೂಜಾರಿ ಬಜಗುತ್ತು, ಸತ್ಯಶಂಕರ ಮಯ್ಯ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಹಾಬಲ ಗೌಡ, ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ, ಆನುವಂಶೀಯ ಆಡಳಿತ ಮೊಕ್ತೇಸರ ಕುಕ್ಕಪ್ಪ ಗೌಡ, ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ ಅಂಗಡಿ ಮಜಲು, ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಹೊನ್ನಪ್ಪ ಗೌಡ, ಭಜನಾ ಮಂಡಳಿ ಅಧ್ಯಕ್ಷ ಲಕ್ಷ್ಮಣ ಗೌಡ ಫಲಸದಕೋಡಿ, ಮಹಿಳಾ ಮಂಡಳಿ ಅಧ್ಯಕ್ಷೆ ಶ್ವೇತಾ ಹಾರ್ತ್ಯಾರು ಹಾಗೂ ಪದಾಧಿಕಾರಿಗಳು, ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net