ಪೆರ್ಲ ಶ್ರೀ ಸತ್ಯನಾರಾಯಣ ಶಾಲೆಯಲ್ಲಿ ತರಬೇತಿ

9
Published on

ಕಾಸರಗೋಡು: ಕೇರಳ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾಸರಗೋಡು ಜಿಲ್ಲಾ ಘಟಕ ವತಿಯಿಂದ ತರಬೇತಿ ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆಯಲ್ಲಿ ಜರುಗಿತು.

ಎಣ್ಮಕಜೆ ಗ್ರಾಪಂ ಉಪಾಧ್ಯಕ್ಷೆ ರಮ್ಲಾ ಇಬ್ರಾಹಿಂ ಉದ್ಘಾಟಿಸಿದರು. ಶಾಲಾ ರಕ್ಷಕ-ಶಿಕ್ಷಕ ಸಂಘ ಅಧ್ಯಕ್ಷ ನಾರಾಯಣ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಶಿಕ್ಷಕ ಎನ್.ಕೇಶವ ಪ್ರಕಾಶ್ ಶಿಬಿರದ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು. ಬಿಆರ್‌ಸಿ ಜಿಲ್ಲಾ ಸಂಯೋಜಕಿ ರಮ್ಯಾ, ಯತೀಶ್ ಬಲ್ಲಾಳ್ ಶಿಬಿರ ನಡೆಸಿಕೊಟ್ಟರು. ಶಾಲೆ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಬಿರದಲ್ಲಿ ಪಾಲ್ಗೊಂಡಿದ್ದರು. ಶಿಕ್ಷಕರಾದ ಶ್ರೀಹರಿ ಸ್ವಾಗತಿಸಿದರು. ಉಮೇಶ್ ಕೆ.ಪೆರ್ಲ ನಿರೂಪಿಸಿದರು. ಮಮತಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net