ಎನ್‌ಎಚ್‌ಎಂ ಗುತ್ತಿಗೆ ನೌಕರರನ್ನು ಕಾಯಂಗೊಳಿಸಿ

Permanent NHM contract employees
ಬಾದಾಮಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಎನ್‌ಎಚ್‌ಎಂ ನೌಕರರು ಕಾಯಂಗೊಳಿಸುವಂತೆ ಆಗ್ರಹಿಸಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ಡಾ. ವೀಣಾ ಪಟ್ಟಣದ(ಕೋರಿ), ವಿನೋದ ಹೊಸೂರ, ತಾಜಿಬೆಹನ್ ಮಕಾನದಾರ, ಸ್ನೇಹಾ ನಾಯ್ಕರ್ ಇತರರಿದ್ದರು.
Published on

ಬಾದಾಮಿ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎನ್‌ಎಚ್‌ಎಂ ಒಳಗುತ್ತಿಗೆ ನೌಕರರ ಸಂಘದ ತಾಲೂಕು ಪದಾಧಿಕಾರಿಗಳು ತಮ್ಮ ಸೇವೆ ಕಾಯಂಗೊಳಿಸುವಂತೆ ಆಗ್ರಹಿಸಿ ಸೋಮವಾರ ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಿದರು.

ಸ್ಥಳೀಯ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರತಿಭಟನೆ ಕೈಗೊಂಡು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾಯಂಗೊಳಿಸುವ ಭರವಸೆ ನೀಡಿತ್ತು. ಒಂದು ವರ್ಷ ಕಳೆದರೂ ಇನ್ನೂ ಕಾಯಂಗೊಳಿಸುತ್ತಿಲ್ಲ ಎಂದು ಆರೋಪಿಸಿದರು.

ಅಂದಾಜು 18, 20 ವರ್ಷಗಳಿಂದ ವೈದ್ಯರು, ಫಾರ್ಮಾಸಿಷ್ಟ್, ಪ್ರಯೋಗಾಲಯ ಸಿಬ್ಬಂದಿ, ಆಪ್ತ ಸಮಾಲೋಚಕರು, ಶುಶ್ರೂಷಕರು, ಕ್ಷಯರೋಗ ವಿಭಾಗದ ಸಿಬ್ಬಂದಿ ಹಾಗೂ ಇತರ ಸಿಬ್ಬಂದಿ ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಲ್ಲ ರಾಷ್ಟ್ರೀಯ ಕಾರ್ಯಕ್ರಮ ಯಶಸ್ವಿಗೊಳಿಸುವಲ್ಲಿ ಮತ್ತು ಕೋವಿಡ್-19ರಂತಹ ಮಹಾಮಾರಿ ಸಂದರ್ಭದಲ್ಲೂ ಶಮಿಸಿದ್ದಾರೆ. ಈ ಹಿಂದೆ ಬಿಜೆಪಿ ಆಡಳಿತದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಕುಳಿತಾಗ ಈಗಿನ ಡಿಸಿಎಂ ಡಿ.ಕೆ. ಶಿವಕುಮಾರ ಅವರು ನಮ್ಮ ಬೇಡಿಕೆಗೆ ಸ್ಪಂದಿಸಿ, ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ 28 ಸಾವಿರ ಸಿಬ್ಬಂದಿಗೆ ಕಾಯಂಗೊಳಿಸುವ ಭರವಸೆ ನೀಡಿದ್ದರು. ಆದರೆ ವರ್ಷ ಕಳೆದರೂ ಭರವಸೆ ಈಡೇರಿಸಿಲ್ಲ ಎಂದು ದೂರಿದರು.

ಡಾ. ವೀಣಾ ಪಟ್ಟಣದ(ಕೋರಿ), ವಿನೋದ ಹೊಸೂರ, ತಾಜಿಬೆಹನ್ ಮಕಾನದಾರ, ಸ್ನೇಹಾ ನಾಯ್ಕರ್, ಗಂಗಾಧರ ಹಾಗೂ ಎಲ್ಲ ವಿಭಾಗದ ಎನ್‌ಎಚ್‌ಎಂ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net