

ರಾಯಚೂರು: ನಗರಸಭೆಯಲ್ಲಿ ನೇರ ಪಾವತಿ, ಹೊರಗುತ್ತಿಗೆಯಡಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಒಳಚರಂಡಿ ಸ್ವಚ್ಛತಾ ಕಾರ್ಮಿಕರು, ವಾಹನ ಚಾಲಕರು ಮತ್ತು ಸಹಾಯಕರನ್ನು ಕಾಯಂಗೊಳಿಸುವಂತೆ ಒತ್ತಾಯಿಸಿ ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಕರ್ನಾಟಕ ರಾಜ್ಯ ದಿನಗೂಲಿ ಮತ್ತು ಗುತ್ತಿಗೆ ಪೌರ ಸೇವಾ ನೌಕರರ ಸಂಘದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಪೌರ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ರೈತ ವಿದ್ಯಾನಿ ಮಾದರಿಯಲ್ಲಿ ವಿದ್ಯಾರ್ಥಿ ವೇತನ ಜಾರಿ ಮಾಡಬೇಕು. ಎಲ್‌ಕೆಜಿಯಿಂದ ಉನ್ನತ ಶಿಕ್ಷಣದವರೆಗೆ ಉಚಿತ ಶಿಕ್ಷಣ ನೀಡಬೇಕು ಎಂದು ಒತ್ತಾಯಿಸಿದರು.
700 ಜನರಿಗೊಬ್ಬ ಪೌರ ಕಾರ್ಮಿಕ ಎಂಬುದರ ಬದಲಾಗಿ 500 ಜನರಿಗೆ ಒಬ್ಬರ ಪೌರ ಕಾರ್ಮಿಕರ ನೇಮಕ ಮಾಡಲು ಕ್ರಮಕೈಗೊಳ್ಳಬೇಕು. ನೇರ ವೇತನ ಪೌರ ಕಾರ್ಮಿಕರಿಗೆ ಸರ್ಕಾರದ ಆದೇಶದ ಪ್ರಕಾರ 2 ಸಾವಿರ ರೂ. ಸಂಕಷ್ಟ ಭತ್ಯೆ ನೀಡಬೇಕು.
ಕೆಲಸದ ಸಮಯದಲ್ಲಿ ನೇರ ವೇತನದಡಿ ಕೆಲಸ ಮಾಡುತ್ತಿದ್ದ 6 ಕಾರ್ಮಿಕರು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಪರಿಹಾರ ಹಾಗೂ ಕುಟುಂಬಕ್ಕೆ ಅನುಕಂಪದ ಆಧಾರದ ಮೇಲೆ ಕೆಲಸ ನೀಡಬೇಕು. ವಿದ್ಯುತ್ ವಿಭಾಗದ ಗುತ್ತಿಗೆ ಕಾರ್ಮಿಕರು ಬಾಕಿಯಿರುವ ಐದು ತಿಂಗಳ ವೇತನ ಪಾವತಿಸಬೇಕು.
2019 ರಿಂದ 2023ರವರೆಗೆ ನಗರಸಭೆ ಪೌರ ಕಾರ್ಮಿಕರಿಗೆ ಸಮವಸ, ಕೈಗವಸು ಸೇರದಂತೆ ಅಗತ್ಯ ಸಲಕರಣೆಗಳನ್ನು ನೀಡಲಾಗಿಲ್ಲ. ಕೂಡಲೇ ಸಲಕರಣೆ ನೀಡಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಸಂಘದ ಗೌರವಾಧ್ಯಕ್ಷ ಎಸ್.ಮಾರೆಪ್ಪ, ಜಿಲ್ಲಾಧ್ಯಕ್ಷ ಉರುಕುಂದಪ್ಪ, ಪದಾಕಾರಿಗಳಾದ ಮುತ್ತಣ್ಣ, ಆರ್.ಹನುಮಂತು, ನರಸಿಂಹಲು ಪಾಲ್ಗೊಂಡಿದ್ದರು.