

ಮೈಸೂರು: ಕೊಳವೆಬಾವಿ ಕೊರೆಯಲು ಅನುಮತಿ ಪಡೆಯುವುದು ಕಡ್ಡಾಯಗೊಳಿಸಲಾಗಿದೆ.
ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ರಿಗ್ ಯಂತ್ರಗಳು ಕರ್ನಾಟಕ ಅಂತರ್ಜಲ ಪ್ರಾಧಿಕಾರದಲ್ಲಿ ನೋಂದಣಿಯಾಗಿ ನಿರಾಕ್ಷೇಪಣಾ ಪತ್ರವನ್ನು ಪಡೆದು ಕೊರೆಯುವ ಕೆಲಸ ನಿರ್ವಹಿಸಬೇಕಾಗಿರುತ್ತದೆ. ಒಂದು ವೇಳೆ ಅನುಮತಿ ಪಡೆಯದೆ ಕಾರ್ಯನಿರ್ವಹಿಸುವ ರಿಗ್ ಮಾಲೀಕರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ.
ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿರುವ ಕೈಗಾರಿಕೆ, ವಾಣಿಜ್ಯ, ಮೂಲ ಸೌಕರ್ಯ ಅಭಿವೃದ್ಧಿ, ಗಣಿಗಾರಿಕೆ, ಮನರಂಜನೆ ಘಟಕಗಳು ಅಂತರ್ಜಲವನ್ನು ಬಳಸಲು ಕರ್ನಾಟಕ ಅಂತರ್ಜಲ ಪ್ರಾಧಿಕಾರದ ಜಿಲ್ಲಾ ಅಂತರ್ಜಲ ಸಮಿತಿಯಿಂದ ನಿರಾಕ್ಷೇಪಣಾ ಪತ್ರ (ಎನ್‌ಒಸಿ) ಪಡೆಯಬೇಕು. ಇದನ್ನು ಪಡೆಯಲು ಸೂಕ್ತ ದಾಖಲಾತಿಗಳೊಂದಿಗೆ https://kgwa.in/Public ವೆಬ್ ಪೋರ್ಟೆಲ್ ಅಥವಾ https://antharjala.karnataka.gov.In ವೆಬ್‌ಸೈಟ್‌ನ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
.
ಮಾಹಿತಿಗಾಗಿ ಮೈಸೂರಿನ ಸರಸ್ವತಿಪುರಂನ ಜಿಲ್ಲಾ ಅಂತರ್ಜಲ ಕಚೇರಿಯ ( ದೂ.ಸಂ:0821-2340619) ಅಥವಾ ಇ-ಮೇಲ್: sggwsmys@gmail.com ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂತರ್ಜಲ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.