

ವಿಜಯವಾಣಿ ಸುದ್ದಿಜಾಲ ಧಾರವಾಡ
ಹುಬ್ಬಳ್ಳಿಯ ಗೋಕುಲ ರಸ್ತೆಯ ಬಸ್ ನಿಲ್ದಾಣ, ಹೊಸೂರು ಬಸ್ ನಿಲ್ದಾಣ, ಎಂ.ಟಿ. ಮಿಲ್ ಹತ್ತಿರ ಹಾಗೂ ಧಾರವಾಡದ ಗ್ರಾಮೀಣ ಬಸ್ ನಿಲ್ದಾಣ, ರೈಲು ನಿಲ್ದಾಣ ಹಾಗೂ ಹೊಸ ಬಸ್ ನಿಲ್ದಾಣ ಹತ್ತಿರ ಆಟೋರಿಕ್ಷಾ ನಿಲ್ದಾಣಗಳನ್ನು ನಿರ್ಮಾಣ ಮಾಡಲು ಪಾಲಿಕೆ ಅಽಕಾರಿಗಳಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅನುಮತಿ ನೀಡಿದರು.
ತಮ್ಮ ಕಚೇರಿ ಸಭಾಭವನದಲ್ಲಿ ಸೋಮವಾರ ಆಯೋಜಿಸಿದ್ದ ಧಾರವಾಡ ಪ್ರಾದೇಶಿಕ ಸಾರಿಗೆ ಪ್ರಾಽಕಾರ ಹಾಗೂ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆಟೋರಿಕ್ಷಾ ನಿಲ್ದಾಣ ನಿರ್ಮಾಣಕ್ಕಾಗಿ ಅನುಮತಿಸಿದ ಸ್ಥಳಗಳಲ್ಲಿ ಜಾಗ ಗುರುತಿಲು ಡಿಸಿಪಿ ನೇತೃತ್ವದಲ್ಲಿ ಪ್ರಾದೇಶಿಕ ಸಾರಿಗೆ, ಪಾಲಿಕೆ ಅಽಕಾರಿಗಳನ್ನು ಒಳಗೊಂಡ ಉಪ ಸಮಿತಿ ವರದಿ ಸಲ್ಲಿಸಬೇಕು.
ಅನುಮತಿ ಇಲ್ಲದ ವಾಹನಗಳನ್ನು ಬಾಡಿಗೆ ನಡೆಸುತ್ತಿರುವವರ ವಿರುದ್ಧ ಕ್ರಮ ಜರುಗಿಸಲು ಸಮಿತಿಯು, ಆಟೋರಿಕ್ಷಾಗಳ ಸಂಘಟನೆಗಳ ಪದಾಧಿಕಾರಿಗಳು, ಸಾರ್ವಜನಿಕರು, ಇತರೆ ಸಂಘ- ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಸಭೆ ಜರುಗಿಸಬೇಕು. ಮೀಟರ್ ದರ ನಿಗದಿ ಕುರಿತು ಅಭಿಪ್ರಾಯ ಸಂಗ್ರಹಿಸಬೇಕು. ಅಕ್ಕಪಕ್ಕದ ಜಿಲ್ಲೆಗಳಲ್ಲಿ ವಿಧಿಸಲಾಗುತ್ತಿರುವ ದರಗಳೊಂದಿಗೆ ಹೋಲಿಕೆ ಮಾಡಿ ತಿಂಗಳೊಳಗೆ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ, ಉಪ ಪೊಲೀಸ್ ಆಯುಕ್ತ ರವೀಶ ಸಿ.ಆರ್. ಮಾತನಾಡಿದರು.
ಜಿಲ್ಲಾ ನಗರಾಭಿವೃದ್ಧಿ ಕೊಶದ ಯೋಜನಾ ನಿರ್ದೇಶಕ ಅಜೀಜ ದೇಸಾಯಿ, ಆರ್‌ಟಿಒ, ಪಾಲಿಕೆ, ಪೊಲೀಸ್, ರಾಷ್ಟ್ರೀಯ ಹೆದ್ದಾರಿ ಪ್ರಾಽಕಾರ, ಲೋಕೋಪಯೋಗಿ, ವಾಯವ್ಯ ಸಾರಿಗೆ, ಬಿಆರ್‌ಟಿಎಸ್ ಅಧಿಕಾರಿಗಳು ಹಾಜರಿದ್ದರು.