ಪೆರ್ಣಂಕಿಲ ದೇವಸ್ಥಾನದಲ್ಲಿ ಷಢಾಧಾರ ಪ್ರತಿಷ್ಠೆ

IMG-20230521-WA0018
Published on

ಉಡುಪಿ:  ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪೆರ್ಣಂಕಿಲ ಗ್ರಾಮದ ಶ್ರೀ ಮಹಾಗಣಪತಿ - ಮಹಾಲಿಂಗೇಶ್ವರ ದೇವಾಲಯದ ಸಂಪೂರ್ಣ ಜೀರ್ಣೋದ್ಧಾರ ಕಾರ್ಯ  ಅಂಗವಾಗಿ ಭಾನುವಾರ ದೇವಸ್ಥಾನದಲ್ಲಿ  ಷಢಾಧಾರ ಪ್ರತಿಷ್ಠೆ ಮತ್ತು ಗರ್ಭನ್ಯಾಸ ಕಾರ್ಯಕ್ರಮ ನಡೆಯಿತು.

  ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ  ಧಾರ್ಮಿಕ ಕಾರ್ಯಕ್ರಮವನ್ನು ದೇವಸ್ಥಾನದ ತಂತ್ರಿಗಳಾದ ಮಧುಸೂದನ ತಂತ್ರಿ ಮತ್ತು ಅವಧಾನಿ ಸುಬ್ರಹ್ಮಣ್ಯ ಭಟ್ ಗುಂಡಿಬೈಲು ನಡೆಸಿಕೊಟ್ಟರು.

  ಈ ಸಂದರ್ಭದಲ್ಲಿ ಕಾಪು ಕ್ಷೇತ್ರದ ನೂತನ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಮೆಂಡನ್, ಉಡುಪಿ ಕ್ಷೇತ್ರದ ನೂತನ ಶಾಸಕ ಯಶಪಾಲ್ ಸುವರ್ಣ ಅವರು ಉಪಸ್ಥಿತರಿದ್ದರು. 

  ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಿದ್ವಾನ್ ಹರಿದಾಸ ಭಟ್, ಪ್ರ.ಕಾರ್ಯದರ್ಶಿ ಶ್ರೀಶ ನಾಯಕ್ ಪೆರ್ಣಂಕಿಲ, ಪೇಜಾವರ ಮಠದ ದಿವಾನರಾದ ರಘುರಾಮ ಆಚಾರ್ಯ, ಆಡಳಿತಾಧಿಕಾರಿ ಸುಬ್ರಹ್ಮಣ್ಯ ಭಟ್ ಸಗ್ರಿ, ದೇವಳದ ಸಾರ್ವಜನಿಕ ಸಂಪರ್ಕಾಧಿಕಾರಿ ಹರೀಶ ಸರಳಾಯ, ವ್ಯವಸ್ಥಾಪಕರಾದ ಸುರೇಶ ತಂತ್ರಿ, ಸಮಿತಿಯ ಪದಾಧಿಕಾರಿಗಳಾದ  ಸುವರ್ಧನ ನಾಯಕ್, ಸದಾನಂದ ಪ್ರಭು, ಉಮೇಶ್ ನಾಯಕ್, ಮಹೇಶ್ ಕುಲಕರ್ಣಿ, ಸಂದೀಪ್ ನಾಯಕ್ ಹೆಬ್ಬಾಗಿಲು ಮುಂತಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net