ಸತತ ಅಧ್ಯಯನದಿಂದ ಸಾಧನೆ ಮಾಡಲು ಸಾಧ್ಯ

1
ಅಂಕಲಿ ಗ್ರಾಮದ ಕೆಎಲ್ಇ ಸಂಸ್ಥೆಯ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪುನಶ್ಚೇತನ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ವೈಭವ ಚೌಹಾನ, ಎಂ.ಎಸ್.ಕಾನಡೆ, ಅಶ್ವಿನಿ ಬಡಿಗೇರ ಇತರರು ಇದ್ದರು.
Published on

ಮಾಂಜರಿ: ಶಿಕ್ಷಣವೇ ಶ್ರೇಷ್ಠ. ಸತತ ಅಧ್ಯಯನದಿಂದ ಸಾಧನೆ ಮಾಡಲು ಸಾಧ್ಯ. ಆಸಕ್ತಿದಾಯಕ ಕಲಿಕೆಯಿಂದ ಜ್ಞಾನದ ಬೆಳಕಿನಲ್ಲಿ ಹೆಜ್ಜೆ ಗುರುತು ಮೂಡಿಸಬೇಕು ಎಂದು ಬೆಳಗಾವಿಯ ತತ್ರಾಂಶ ಅಭಿವೃದ್ಧಿದಾರ ವೈಭವ ಚೌಹಾನ ಹೇಳಿದರು.

ಸಮೀಪದ ಅಂಕಲಿ ಗ್ರಾಮದ ಕೆಎಲ್ಇ ಶಿಕ್ಷಣ ಸಂಸ್ಥೆಯ ಪದವಿ ಮಹಾವಿದ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬಿಸಿಎ ವಿಭಾಗದ ಪುನಶ್ಚೇತನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರಾಚಾರ್ಯ ಎಂ.ಎಸ್.ಕಾನಡೆ ಮಾತನಾಡಿ, ವಿದ್ಯಾರ್ಥಿಗಳು ಜ್ಞಾನ ಮತ್ತು ಕೌಶಲ ಬೆಳೆಸಿಕೊಳ್ಳಬೇಕು ಎಂದರು. ಮಹಾವಿದ್ಯಾಲಯದ ಸಿಬ್ಬಂದಿ ಹಾಗೂ ಕೆಎಲ್‌ಇ ಸಂಸ್ಥೆಯ ಅಂಗಸಂಸ್ಥೆಗಳ ಮುಖ್ಯಸ್ಥರು, ವಿದ್ಯಾರ್ಥಿಗಳು, ಪಾಲಕರು ಹಾಜರಿದ್ದರು. ಅಶ್ವಿನಿ ಬಡಿಗೇರ ಸ್ವಾಗತಿಸಿದರು. ಶ್ರೇಯಾ ನಿರೂಪಿಸಿದರು. ಗಣೇಶ ರುಪಣ್ಣವರ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net