

ಸಿಂಧನೂರು: ವಿದ್ಯಾರ್ಥಿಗಳ ನಿರಂತರ ಕಠಿಣ ಅಭ್ಯಾಸ ಮಾಡಿ ಉನ್ನತ ಹುದ್ದೆ ಪಡೆಯಲು ಮುಂದಾಗಬೇಕು ಎಂದು ಗ್ರಾಪಂ ಅಧ್ಯಕ್ಷ ಅಂಬಣ್ಣ ಗುಂಜಳ್ಳಿ ಹೇಳಿದರು.
ತಾಲೂಕಿನ ಗುಂಜಳ್ಳಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗ್ರಾಪಂ ವತಿಯಿಂದ ಆಯೋಜಿಸಿದ್ದ ದಿನಕ್ಕೊಂದು ವಿಷಯದ ಜ್ಞಾನ ದಾಸೋಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇತ್ತೀಚೆಗೆ ಶ್ರಾವಣ ದಾಸೋಹ ಕಾರ್ಯಕ್ರಮ ನಿರೀಕ್ಷೆ ಮೀರಿ ಯಶಸ್ಸು ಕಂಡಿದ್ದು, ಮಕ್ಕಳ ಹಾಜರಾತಿ ಹೆಚ್ಚಾಗಿದೆ. ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಆರು ವಿಷಯಗಳ ಜ್ಞಾನ ದಾಸೋಹ ಕಾರ್ಯಕ್ರಮ ನಡೆಸಿದ ಶಿಕ್ಷಕರ ಕಾರ್ಯ ಶ್ಲಾಘನೀವಾಗಿದೆ ಎಂದರು.
ಗ್ರಾಪಂ ಒಕ್ಕೂಟದ ಅಧ್ಯಕ್ಷ ಮಹಾಂತೇಶ ಹಿರೇಗೌಡ್ರ, ಸಂಪನ್ಮೂಲ ವ್ಯಕ್ತಿ ಬಸಪ್ಪ ಹ್ಯಾಟಿ ಮಾತನಾಡಿದರು. ಮುಖ್ಯಶಿಕ್ಷಕ ನಾಗಪ್ಪ ಬೇರ‌್ಗಿ, ಶಿಕ್ಷಕರಾದ ಬಸವರಾಜ ಬಿಜೇಕಲ್, ಬಸವರಾಜ, ಎಸ್ಡಿಎಂಸಿ ಅಧ್ಯಕ್ಷ, ಸದಸ್ಯರು, ಗ್ರಾಪಂ ಸದಸ್ಯರು ಇದ್ದರು.