

ಕೂಡ್ಲಿಗಿ: ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವಿನ ಜತೆ ಉತ್ತಮ ಗುರಿ ಇಟ್ಟಕೊಂಡು ನಿರಂತರ ಅಧ್ಯಯನ ಮಾಡಿ ಸಾಧಕರಾಗಬೇಕು ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.
ಪಟ್ಟಣದ ಸರ್ಕಾರಿ ಸಂಯುಕ್ತ ಪಪೂ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರಸ್ತುತ ದಿನಗಳಲ್ಲಿ ಪಠ್ಯ ಹಾಗೂ ಪಠ್ಯೇತರ ವಿಷಯದಲ್ಲಿ ಗ್ರಾಮೀಣ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸುತ್ತಿದ್ದಾರೆ. ಗುಣಾತ್ಮಕ ಶಿಕ್ಷಣವನ್ನು ಪಡೆದುಕೊಳ್ಳುವ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು.
ಇದನ್ನೂ ಓದಿ: ವಿದ್ಯಾರ್ಥಿಗಳು ಸತತ ಅಧ್ಯಯನಶೀಲರಾಗಲಿ
ಶಿಕ್ಷಣದ ನಂತರದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಕಾಲೇಜಿನಲ್ಲಿನ ಮೂಲಭೂತ ಸೌಕರ್ಯ ಕೊರತೆ ಸರಿಪಡಿಸಲಾಗುವುದು ಎಂದು ತಿಳಿಸಿದರು.
ಮೊದಲ ವರ್ಷದ ವಿದ್ಯಾರ್ಥಿಗಳನ್ನು ದ್ವಿತೀಯ ವರ್ಷದ ವಿದ್ಯಾರ್ಥಿಗಳು ಹೂ ಗುಚ್ಛ ನೀಡಿ ಸ್ವಾಗತಿಸಿದರು.
ನಂತರ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷ ಪಿ.ಪಂಪಾಪತಿ, ಗಾಂಧಿ ಸ್ಮಾರಕ ಸಮಿತಿ ಅಧ್ಯಕ್ಷ ಡಿ.ನಾಗರಾಜ, ಸಿಡಿಸಿ ಸಮಿತಿ ಸದಸ್ಯ ಬಣಕಾರ ಬಸವರಾಜ, ಮುಖಂಡರಾದ ನಾಗಮಣಿ ಜಿಂಕಾಲ್,ಪಪಂ ಸದಸ್ಯ ಕಾವಲಿ ಶಿವಪ್ಪನಾಯಕ, ಎಚ್.ವೀರಭದ್ರಪ್ಪ, ಉಪನ್ಯಾಸಕರಾದ ಜಿ.ಬಸವರಾಜ, ಸಕ್ರಪ್ಪ ರಡ್ಡೇರ್, ಜೆ.ವೆಂಕಟೇಶ್, ಹೆಗ್ಗಪ್ಪ ಹಳ್ಳಿ ಇದ್ದರು.