

ಬೆಳಗಾವಿ: ಪ್ರಾಥಮಿಕ ಹಂತದಲ್ಲಿಯೇ ವಿದ್ಯಾರ್ಥಿಗಳು ನಿರಂತರ ಪರಿಶ್ರಮ ಮತ್ತು ಪರಿಶ್ರಮ ಮೈಗೂಡಿಸಿಕೊಳ್ಳಬೇಕು ಎಂದು ರೋಟರಿಯನ್ ಬೆಲಗಾಂ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಅವಿನಾಶ ಪೋತದಾರ ಹೇಳಿದರು.
ನಗರದ ಭರತೇಶ ಪಿಯು ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಮಾತನಾಡಿದ ಅವರು, ಡಾ.ಎ.ಪಿ.ಜೆ.ಅಬ್ದುಲ್ ಕಲಾಂ, ಸಚಿನ ತೆಂಡೂಲ್ಕರ್, ನಾರಾಯಣಮೂರ್ತಿ ಇವರೆಲ್ಲರೂ ನಿರಂತರ ಅಧ್ಯಯನ ಮತ್ತು ಕಠಿಣ ಪರಿಶ್ರಮದಿಂದ ಸಮಾಜದ ಉನ್ನತ ಸ್ಥಾನಕ್ಕೇರಿದ್ದಾರೆ. ಅವರ ಸಾಧನೆಗಳು ನಿಮಗೆ ಮಾರ್ಗದರ್ಶಕವಾಗಬೇಕು ಎಂದರು.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ತಿಕ ಸುರೇಕರ ಪ್ರಧಾನ ಕಾರ್ಯದರ್ಶಿ ಮತ್ತು ಭೂಮಿ ಜಕ್ಕನ್ನವರ ವಿದ್ಯಾರ್ಥಿನಿ ಪ್ರತಿನಿಧಿಯನ್ನಾಗಿ ಆಯ್ಕೆ ಮಾಡಿದರು. ಭರತೇಶ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವಿನೋದ ದೊಡ್ಡಣ್ಣವರ, ಸಂಸ್ಥೆಯ ಉಪಾಧ್ಯಕ್ಷ ಶ್ರೀಪಾಲ ಖೇಮಲಾಪೂರೆ, ಆಡಳಿತ ಮಂಡಳಿ ಸದಸ್ಯ ಹಿರಾಚಂದ ಕಲಮನಿ, ಪ್ರಾಚರ್ಯ ಸುನೀತಾ ದೇಶಪಾಂಡೆ, ಶೃತಿ ಭುರಾಣಿ, ಪ್ರವೀಣ ಹರಿಜನ ಇತರರಿದ್ದರು.