

ಮಂಗಳೂರು: ನಗರದ ಹೊಯ್ಗೆಬಜಾರ್ ನಲ್ಲಿ ಭಾನುವಾರ ಸಾಯಂಕಾಲ ಬಿಹಾರ ಮೂಲದ ದಂಪತಿಯ ಎರಡು ವರ್ಷದ ಮಗುವಿನ ಮೇಲೆ ಪರಿಚಯದ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿ ಉಪ್ಪು ನೀರಿನ ಟ್ಯಾಂಕ್ ಗೆ ಎಸೆದು ಹೋಗಿದ್ದಾನೆ. ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಮಗುವನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಣಾಪಾಯದಿಂದ ಮಗು ಪಾರಾಗಿದ್ದು, ಆರೋಪಿಯನ್ನು ಬಂಧಿಸಿರುವುದಾಗಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.